ಬಳ್ಳಾರಿ: ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಸಾಹಿತಿ ಗಿರೀಶ್ ಕಾರ್ನಾಡ್ ಅವರ ನಿಧನಕ್ಕೆ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಸಂತಾಪ ಸೂಚಿಸಿದ್ದಾರೆ.
ಗಿರೀಶ್ ಕಾರ್ನಾಡ್ ನಿಧನಕ್ಕೆ ಮಾಜಿ ಸಿಎಂ ಶೆಟ್ಟರ್ ಸಂತಾಪ - BALLARI CITY JAGADISH SHETTER TALK
ಗಿರೀಶ್ ಕಾರ್ನಾಡ್ ಅವರ ಹೆಸರು ಸಾಹಿತ್ಯ ಲೋಕದಲ್ಲಿ ಅಚ್ಚಳಿಯದಂತೆ ಉಳಿದಿದೆ. ಸಾಹಿತ್ಯ ಲೋಕಕ್ಕೆ ಅವರು ಸಲ್ಲಿಸಿದ ಸೇವೆ ಅಗಣಿತವಾಗಿದೆ. ಅವರ ಅಗಲಿಕೆಯಿಂದ ಈ ನಾಡಿಗೆ ತುಂಬಲಾರದ ನಷ್ಟವಾಗಿದೆ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಸಂತಾಪ ವ್ಯಕ್ತಪಡಿಸಿದ್ದಾರೆ.
ಗಿರೀಶ್ ಕಾರ್ನಾಡ್ ನಿಧನಕ್ಕೆ ಮಾಜಿ ಸಿಎಂ ಶೆಟ್ಟರ್ ಸಂತಾಪ
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗಿರೀಶ್ ಕಾರ್ನಾಡ್ ಅವರ ಹೆಸರು ಸಾಹಿತ್ಯ ಲೋಕದಲ್ಲಿ ಅಚ್ಚಳಿಯದಂತೆ ಉಳಿದಿದೆ. ಸಾಹಿತ್ಯ ಲೋಕಕ್ಕೆ ಅವರು ಸಲ್ಲಿಸಿದ ಸೇವೆ ಅಗಣಿತವಾಗಿದೆ. ಅವರ ಅಗಲಿಕೆಯಿಂದ ಈ ನಾಡಿಗೆ ತುಂಬಲಾರದ ನಷ್ಟವಾಗಿದೆ ಎಂದರು.
ಇನ್ನು ವೇದಿಕೆ ಕಾರ್ಯಕ್ರಮದಲ್ಲಿ ಜಗದೀಶ್ ಶೆಟ್ಟರ್ ಸೇರಿದಂತೆ ಹಲವರು ಆಗಮಿಸಿದ್ದರು. ಐದು ನಿಮಿಷಗಳ ಕಾಲ ಮೌನಾಚರಣೆ ಮೂಲಕ ಗಿರೀಶ್ ಕಾರ್ನಾಡರ ನಿಧನಕ್ಕೆ ಸಂತಾಪ ಸೂಚಿಸಿದರು.