ನವದೆಹಲಿ:ದೇಶದ ಪ್ರಥಮ ಪ್ರಧಾನಿ ಪಂಡಿತ್ ಜವಾಹರ್ಲಾಲ್ ನೆಹರು ಅವರ 55ನೇ ಪುಣ್ಯತಿಥಿ ಅಂಗವಾಗಿ ಇಂದು ಶಾಂತಿವನದಲ್ಲಿರುವ ಅವರ ಸಮಾಧಿಗೆ ಗೌರವ ನಮನ ಸಲ್ಲಿಸಲಾಯಿತು.
ಪಂಡಿತ ನೆಹರು ಪುಣ್ಯಸ್ಮರಣೆ.. ಮೋದಿ ಸೇರಿ ನಾನಾ ಗಣ್ಯರಿಂದ ಮೊದಲ ಪಿಎಂ ದೇಶಸೇವೆಯ ಬಗ್ಗೆ ಗುಣಗಾನ - ನರೇಂದ್ರ ಮೋದಿ
ಮಾಜಿ ಪ್ರಧಾನಿ ಜವಾಹರ್ಲಾಲ್ ನೆಹರು ಅವರ ಪುಣ್ಯತಿಥಿ ಅಂಗವಾಗಿ ಇಂದು ಶಾಂತಿವನದಲ್ಲಿರುವ ಅವರ ಸಮಾಧಿಗೆ ಗೌರವ ನಮನ ಸಲ್ಲಿಸಲಾಯಿತು.
ಇದೇ ವೇಳೆ ನಿಯೋಜಿತ ಪ್ರಧಾನಿ ನರೇಂದ್ರ ಮೋದಿ ಕೂಡ ನೆಹರು ಅವರಿಗೆ ಗೌರವ ಸಲ್ಲಿಸಿದ್ದಾರೆ.ದೇಶಕ್ಕಾಗಿಸೇವೆ ಮಾಡಿದನೆಹರು ಅವರನ್ನ ಕೊಂಡಾಡಿದ್ದಾರೆ. ದೇಶಕ್ಕೆ ಅವರ ಕೊಡುಗೆ ಅಪಾರ ಎಂದು ಟ್ವೀಟ್ ಮಾಡಿದ್ದಾರೆ. ಇತ್ತ ಶಾಂತಿವನದಲ್ಲಿ ಯುಪಿಎ ವರಿಷ್ಠೆ ಸೋನಿಯಾ ಗಾಂಧಿ, ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ, ಮಾಜಿ ಪ್ರಧಾನಿ ಮನಮೋಹನ್ ಸಿಂಗ್, ಹಮೀದ್ ಅನ್ಸಾರಿ ಸೇರಿದಂತೆ ಅನೇಕರು ಗೌರವ ನಮನ ಸಲ್ಲಿಸಿದರು.
1947ರಲ್ಲಿ ದೇಶಕ್ಕೆ ಸ್ವಾತಂತ್ರ್ಯ ಸಿಕ್ಕ ಬಳಿಕ ಮೊದಲ ಪ್ರಧಾನಿಯಾಗಿ ಅಧಿಕಾರ ಸ್ವೀಕಾರ ಮಾಡಿದ್ದ ನೆಹರು ಅನೇಕ ಅಭಿವೃದ್ಧಿ ಕಾರ್ಯಕ್ರಮ ಜಾರಿಗೆ ತಂದಿದ್ದರು. ಹರಿದು ಹಂಚಿ ಹೋಗಿದ್ದ ದೇಶವನ್ನ ಒಗ್ಗೂಡಿಸುವಲ್ಲಿ ಮಹತ್ವದ ಪಾತ್ರವಹಿಸಿದ್ದರು.