ನವದೆಹಲಿ:ಭಾರತಕ್ಕೆ ಕೊನೆಗೂ ಜಾಗತಿಕ ಮಟ್ಟದಲ್ಲಿ ಬಹುದೊಡ್ಡ ರಾಜತಾಂತ್ರಿಕ ಗೆಲುವು ಸಿಕ್ಕಿದೆ. ಪಾಕ್ ಮೂಲದ ಉಗ್ರ ಸಂಘಟನೆ ಜೈಷ್ ಏ ಮೊಹ್ಮದ್ನ ಮುಖ್ಯಸ್ಥ ಮೌಲಾನಾ ಮಸೂದ್ ಅಜರ್‌ನನ್ನು ಜಾಗತಿಕ ಉಗ್ರನೆಂದು ವಿಶ್ವಸಂಸ್ಥೆಯ ಭದ್ರತಾ ಮಂಡಳಿ ಘೋಷಣೆ ಮಾಡಿದೆ.
ಭಾರತಕ್ಕೆ ಬಹುದೊಡ್ಡ ರಾಜತಾಂತ್ರಿಕ ಗೆಲುವು : ಜೀವವಿರೋಧಿ ಮಸೂದ್ ಅಜರ್‌ಗೆ ಜಾಗತಿಕ ಉಗ್ರನ ಪಟ್ಟ - ಜೈಶ್ ಎ ಮೊಹಮ್ಮದ್
ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರತಕ್ಕೆ ಮತ್ತೊಂದು ರಾಜತಾಂತ್ರಿಕ ಗೆಲುವು ಸಿಕ್ಕಿದೆ. ವಿಶ್ವಸಂಸ್ಥೆ ಪಾಕ್ ಮೂಲದ ಜೈಷ್ ಏ ಮೊಹ್ಮದ್ ಉಗ್ರ ಸಂಘಟನೆಯ ಮುಖ್ಯಸ್ಥ ಮಸೂದ್ ಅಜರ್‌ನನ್ನು ಜಾಗತಿಕ ಉಗ್ರನೆಂದು ಘೋಷಣೆ ಮಾಡಲಾಗಿದೆ.
ಮಸೂದ್ ಅಜರ್‌ನನ್ನು ಜಾಗತಿಕ ಉಗ್ರನೆಂದು ಘೋಷಣೆ ಮಾಡುವಂತೆ ಈ ಹಿಂದೆ ಭಾರತ ನಾಲ್ಕಕ್ಕೂ ಹೆಚ್ಚು ಬಾರಿ ವಿಶ್ವಸಂಸ್ಥೆ ಎದುರು ಮನವಿ ಮಾಡಿಕೊಂಡಿತ್ತು. ಆದರೆ, ಇದಕ್ಕೆ ಚೀನಾ ಅಡ್ಡಗಾಲು ಹಾಕಿದ್ದರಿಂದ ಭಾರತಕ್ಕೆ ಯಶಸ್ಸು ಸಿಕ್ಕಿರಲಿಲ್ಲ. ಇದೀಗ ಭಾರತಕ್ಕೆ ಬೆಂಬಲವಾಗಿ ಅಮೆರಿಕ, ಬ್ರಿಟನ್ ಹಾಗೂ ಫ್ರಾನ್ಸ್ ಚೀನಾದ ಮೇಲೆ ರಾಜತಾಂತ್ರಿಕ ಒತ್ತಡ ಹೇರಿದ್ದರಿಂದ, ಚೀನಾ ತನ್ನ ನಿಲುವು ಹಿಂಪಡೆದುಕೊಂಡಿದೆ. ಹೀಗಾಗಿ ಇಂದು ತನ್ನ ಆಕ್ಷೇಪವನ್ನ ಹಿಂಪಡೆದುಕೊಂಡಿದೆ.
ಜೆಇಎಂ ಮುಖ್ಯಸ್ಥ ಅಜರ್‌ನನ್ನು ಜಾಗತಿಕ ಭಯೋತ್ಪಾದಕನೆಂಬ ಹಣೆಪಟ್ಟಿಗೆ ಸೇರಿಸಬೇಕು ಎಂದು ಭಾರತ ಪುಲ್ವಾಮಾ ದಾಳಿ ಬಳಿಕ ಮಾರ್ಚ್ನಲ್ಲಿ ಹೊಸ ಪ್ರಸ್ತಾವ ಸಲ್ಲಿಸಿತ್ತು. ಇದಕ್ಕೆ ರಾಜತಾಂತ್ರಿಕ ಸಮಸ್ಯೆಯ ನೆಪವೊಡ್ಡಿದ್ದ ಚೀನಾ, 4ನೇ ಬಾರಿ ಪ್ರಸ್ತಾವಕ್ಕೆ ವಿರೋಧ ವ್ಯಕ್ತಪಡಿಸಿತ್ತು. ಇಂದು ವಿಶ್ವಸಂಸ್ಥೆಯಲ್ಲಿ ನಡೆದ ಸಭೆಯಲ್ಲಿ ಮೌಲಾನಾ ಮಸೂದ್ ಅಜರ್‌ನ ಜಾಗತಿಕ ಉಗ್ರನೆಂದು ಘೋಷಣೆ ಮಾಡಿದೆ. ಇದೇ ವಿಷಯವನ್ನ ಭಾರತದ ಅಮೆರಿಕಾ ರಾಯಭಾರಿ ಸೈಯದ್ ಅಕ್ಬರುದ್ದೀನ್ ಟ್ವೀಟ್ ಮಾಡಿ ಖಚಿತ ಪಡಿಸಿದ್ದಾರೆ.