ಕರ್ನಾಟಕ

karnataka

ETV Bharat / briefs

ಸಂಪುಟದಲ್ಲಿ ದಲಿತ,ಅಲ್ಪಸಂಖ್ಯಾತರಿಗೆ ಅವಕಾಶ ನೀಡಿ: ಎಚ್​.ವಿಶ್ವನಾಥ್ ಆಗ್ರಹ - undefined

ಜಾತ್ಯಾತೀತ ಜೆಡಿಎಸ್ ಪಕ್ಷ​ ದಲಿತ,ಅಲ್ಪಸಂಖ್ಯಾತರಿಗೆ ಮೀಸಲಾತಿಗೆ ನ್ಯಾಯ ಒದಗಿಸಿ ಮಂತ್ರಿಸ್ಥಾನ ನೀಡಬೇಕು ಎಂದು ಹುಣಸೂರು ಶಾಸಕ ಎಚ್.ವಿಶ್ವನಾಥ ಸಮ್ಮಿಶ್ರ ಸರ್ಕಾರವನ್ನು ಆಗ್ರಹಿಸಿದ್ದಾರೆ.

ಜೆಡಿಎಸ್​ ರಾಜ್ಯಾಧ್ಯಕ್ಷ ಎಚ್.ವಿಶ್ವನಾಥ

By

Published : Jun 12, 2019, 6:18 PM IST

ಕೊಡಗು:ಸಮಾನ ಮನಸ್ಕರು ಒಟ್ಟಿಗೆ ಸೇರಿ ರಾಜ್ಯದ ರಾಜಕಾರಣವನ್ನು ಶುದ್ಧೀಕರಿಸಬೇಕಾಗಿದೆ ಎಂದು ಜೆಡಿಎಸ್ ಹಿರಿಯ ಮುಖಂಡ ಹಾಗು ಹುಣಸೂರು ಶಾಸಕ ಎಚ್.ವಿಶ್ವನಾಥ್ ಅಭಿಪ್ರಾಯಪಟ್ಟರು. ಇದೇ ವೇಳ ಅವರು, ಸಂಪುಟದಲ್ಲಿ ದಲಿತರು ಮತ್ತು ಅಲ್ಪಸಂಖ್ಯಾತರಿಗೆ ಪ್ರಾತಿನಿಧ್ಯ ನೀಡುವಂತೆ ಆಗ್ರಹಿಸಿದರು.

ಪತ್ರಿಕಾಗೋಷ್ಟಿಯಲ್ಲಿ ಮಾತನಾಡುತ್ತಿರುವ ಜೆಡಿಎಸ್​ ಮುಖಂಡ ಎಚ್.ವಿಶ್ವನಾಥ್

ಆಂಧ್ರಪ್ರದೇಶ ಹಾಗೂ ತೆಲಂಗಾಣದಲ್ಲಿ ಅಲ್ಪಸಂಖ್ಯಾತರಿಗೆ ಉಪಮುಖ್ಯಮಂತ್ರಿ ಸ್ಥಾನ ಕೊಡಲಾಗಿದೆ. ಬಿ.ಎಸ್.ಯಡಿಯೂರಪ್ಪನವರು ಮುಖ್ಯಮಂತ್ರಿ ಆಗಿದ್ದಾಗ ಮುಮ್ತಾಜ್ ಅಲಿಖಾನ್‌ಗೆ ವಿಧಾನ ಪರಿಷತ್ ಸ್ಥಾನ ಕೊಟ್ಟು ಸಚಿವರನ್ನಾಗಿ ಮಾಡಿದ್ದರು. ಎನ್​ಡಿಎ ಸರ್ಕಾರ ಅಲ್ಪಸಂಖ್ಯಾತರಿಗೆ ಕೇಂದ್ರದಲ್ಲಿ ಮಿನಿಸ್ಟರ್‌ಶಿಪ್‌ ನೀಡಿದ್ದಾರೆ. ನಮ್ಮ ಹೆಸರೇ ಜಾತ್ಯಾತೀತವಾಗಿದ್ದು, ಸಂಪುಟದಲ್ಲಿ ಅಲ್ಪಸಂಖ್ಯಾತ ಹಾಗೂ ದಲಿತರಿಗೆ ಅವಕಾಶ ಕಲ್ಪಿಸಿ ಮೀಸಲಾತಿ ನ್ಯಾಯ ಒದಗಿಸಬೇಕು ಎಂದು ರಾಜ್ಯ ಸರ್ಕಾರವನ್ನು ಆಗ್ರಹಿಸಿದರು.

ರಾಜ್ಯಾಧ್ಯಕ್ಷ ಹುದ್ದೆಗೆ ರಾಜೀನಾಮೆ ವಿಚಾರ:

ನಾನು ಪಕ್ಷದ ಸಾಮಾನ್ಯ ಕಾರ್ಯಕರ್ತನಾಗಿ ಕೆಲಸ ಮಾಡುತ್ತೇನೆ. ನನ್ನ ರಾಜೀನಾಮೆ ಅಂಗೀಕರಿಸುವಂತೆ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಿಗೆ ಹೇಳಿದ್ದೇನೆ. ಅವರು ರಾಜೀನಾಮೆ ಹಿಂಪಡೆಯುವಂತೆ ಮನವೊಲಿಸುತ್ತಿದ್ದಾರೆ‌. ಕ್ಷೇತ್ರದ ಶಾಸಕನಾಗಿ ಮತ್ತು ಸಮ್ಮಿಶ್ರದ ಸರ್ಕಾರದ ಯೋಜನೆಗಳನ್ನು ಜನತೆಗೆ ತಿಳಿಸುವ ಪ್ರಾಮಾಣಿಕ ಕೆಲಸ ಮಾಡುತ್ತೇನೆ ಎಂದರು.

ಪಕ್ಷದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಹಲವು ಆಕಾಂಕ್ಷಿಗಳಿದ್ದು ಮಧು ಬಂಗಾರಪ್ಪ, ವೈ.ಎಸ್.ವಿ.ದತ್ತಾ ಹೆಸರು ಕೇಳಿ ಬರುತ್ತಿದೆ. ಅವರಿಗೆ ಪಕ್ಷದ ಅಧ್ಯಕ್ಷ ಸ್ಥಾನವನ್ನು ಸಮರ್ಥವಾಗಿ ನಿಭಾಯಿಸುವ ಸಾಮರ್ಥ್ಯವಿದೆ ಎಂದು ಹೇಳಿದರು.

ಇದೇ ವೇಳೆ ಹಿರಿಯ ಸಾಹಿತಿ ದಿ. ಗಿರೀಶ್ ಕಾರ್ನಾಡ್‌ ಅವರ ಸಾಹಿತ್ಯಿಕ ಸಾಧನೆಗಳನ್ನೂ ಹೆಚ್‌. ವಿಶ್ವನಾಥ್ ಕೊಂಡಾಡಿದ್ರು.

For All Latest Updates

TAGGED:

ABOUT THE AUTHOR

...view details