ಮುಂಬೈ:ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ ಸಿಎಸ್ಕೆ ಪರ ಬ್ಯಾಟ್ ಬೀಸುತ್ತಿದ್ದ ಕೇದಾರ್ ಜಾಧವ್ ಗಾಯಗೊಂಡು ಟೂರ್ನಿಯಿಂದ ಹೊರಬಿದ್ದಿದ್ದರು. ಇದರ ಮಧ್ಯೆ ಅವರು ವಿಶ್ವಕಪ್ ವೇಳೆಗೆ ತಂಡಕ್ಕೆ ಕಮ್ಬ್ಯಾಕ್ ಮಾಡುವುದು ಅನುಮಾನ ಎಂಬ ಮಾತುಗಳು ಕೇಳಿ ಬಂದಿದ್ದವು. ಆದರೆ ಈ ಎಲ್ಲ ಪ್ರಶ್ನೆಗಳಿಗೆ ಇದೀಗ ಉತ್ತರ ಸಿಕ್ಕಿದೆ.
ಭುಜದ ನೋವಿನಿಂದ ಬಳಲುತ್ತಿದ್ದ ಕೇದಾರ್ ಇದೀಗ ಸಂಪೂರ್ಣವಾಗಿ ಗುಣಮುಖರಾಗಿದ್ದು, ಮೇ 22ರಂದು ತಂಡದೊಂದಿಗೆ ಲಂಡನ್‌ಗೆ ಪ್ರಯಾಣ ಬೆಳೆಸಲಿದ್ದಾರೆ ಎಂದು ತಂಡದ ಫಿಸಿಯೋ ಮಾಹಿತಿ ನೀಡಿದ್ದಾರೆ. ಮುಂಬೈನಲ್ಲಿ ನಡೆಸಿರುವ ಫಿಟ್ನೆಸ್ ಪರೀಕ್ಷೆಯಲ್ಲೂ ಕೇದಾರ್ ಪಾಸ್ ಆಗಿದ್ದು, ಈಗಾಗಲೇ ಬಿಸಿಸಿಐಗೆ ಮಾಹಿತಿ ನೀಡಲಾಗಿದೆ ಎಂದು ತಿಳಿದು ಬಂದಿದೆ.