ಬೆಳಗಾವಿ:ಖಾನಾಪುರ ಶಾಸಕಿ ಅಂಜಲಿ ನಿಂಬಾಳ್ಕರ್ ಪ್ರಯಾಣಿಸುತ್ತಿದ್ದ ಕಾರು ಸರಣಿ ಅಪಘಾತಕ್ಕೆ ತುತ್ತಾಗಿದ್ದು, ಅದೃಷ್ಟವಶಾತ್ ಶಾಸಕಿ ಸೇರಿದಂತೆ ಕಾರಿನಲ್ಲಿದ್ದ ಮೂವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಮಹಾರಾಷ್ಟ್ರದ ಸೊಲ್ಲಾಪುರ ಬಳಿ ಸರಣಿ ಕಾರು ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಅಂಜಲಿ ನಿಂಬಾಳ್ಕರ್ ತಲೆ ಹಾಗೂ ಕೈಗೆ ಗಾಯಗಳಾಗಿವೆ. ಕಾರಿನಲ್ಲಿದ್ದ ಚಾಲಕ ಮಹಾದೇವ ಹಾಗೂ ಗನ್ ಮ್ಯಾನ್ ಸೈಯದ್ ಕೂಡ ಗಾಯಗೊಂಡಿದ್ದಾರೆ. ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಅಂಜಲಿ ಪ್ರವಾಸ ಕೈಗೊಂಡಿದ್ದರು ಎಂದು ತಿಳಿದು ಬಂದಿದೆ.