ಕರ್ನಾಟಕ

karnataka

ETV Bharat / briefs

ಭೀಕರ ರಸ್ತೆ ಅಪಘಾತ: ವಿಭಜಕಕ್ಕೆ ಕಾರು ಡಿಕ್ಕಿ, ಐವರ ದುರ್ಮರಣ - ರಸ್ತೆ ವಿಭಜಕ

ಬೀಕರ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಐವರು ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲ್ಲೂಕಿನ ಮೆಟಿಕುರ್ಕಿ ಬಳಿ ನಡೆದಿದೆ. ಘಟನೆಯಲ್ಲಿ ಮೃತಪಟ್ಟವರು ಬೆಂಗಳೂರು ಮೂಲದವರು ಎಂದು ತಿಳಿದುಬಂದಿದೆ.

ದುರ್ಮರಣ

By

Published : May 1, 2019, 8:48 PM IST

ಚಿತ್ರದುರ್ಗ:ಲಾರಿಯನ್ನು ತಪ್ಪಿಸಲು ಹೋಗಿ ರಸ್ತೆ ವಿಭಜಕಕ್ಕೆ ಕಾರು ಡಿಕ್ಕಿಯಾದ ಪರಿಣಾಮ ಒಂದೇ ಕುಟುಂಬದ ಐವರು ಸಾವನ್ನಪ್ಪಿರುವ ದುರ್ಘಟನೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಮೆಟಿಕುರ್ಕಿ ಬಳಿ ಸಂಭವಿಸಿದೆ.

ಬೆಂಗಳೂರು-ಪುಣೆ ರಾಷ್ಟ್ರೀಯ ಹೆದ್ದಾರಿ 4 ರಲ್ಲಿ ಘಟನೆ ನಡೆದಿದ್ದು, ಮೃತಪಟ್ಟವರನ್ನುಸುಶ್ಮಿತಾ (12), ತಾಯಮ್ಮ (50), ಲತಾ (26), ವೀಣಿಕಾ (3), ಜಾಹ್ನವಿ (3) ಎಂದು ಗುರುತಿಸಲಾಗಿದೆ. ಗಾಯಾಳುಗಳನ್ನು ಹಿರಿಯೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕಾರು ಚಾಲಕ ಪ್ರಕಾಶ್​ಗೆ ಗಂಭೀರ ಗಾಯಗಳಾಗಿದ್ದು, ಹಿರಿಯೂರು ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಚಿತ್ರದುರ್ಗದಿಂದ ಬೆಂಗಳೂರಿಗೆ ತೆರಳುವಾಗ ಈ ದಾರುಣ ಘಟನೆ ನಡೆದಿದೆ. ಮಾಹಿತಿ ತಿಳಿದ ತಕ್ಷಣ ಹಿರಿಯೂರು ಗ್ರಾಮಾಂತರ ಠಾಣೆಯ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ‌ ನಡೆಸಿದ್ದಾರೆ.

ABOUT THE AUTHOR

...view details