ಮೈಸೂರು: ಪುರುಷರಿಗಿಂತ ನಾವೇನು ಕಡಿಮೆ ಇಲ್ಲ ಎಂಬ ಮನೋಭಾವನೆಯಿಂದ ಕೆಲಸ ಮಾಡುವ ಶಕ್ತಿಯನ್ನು ಬೆಳಸಿಕೊಳ್ಳಬೇಕು ವಿದ್ಯಾರ್ಥಿನಿಯರಿಗೆ ನಟಿ ಅಮೂಲ್ಯ ಸಲಹೆ ನೀಡಿದ್ದಾರೆ.
ಪುರುಷರಿಗಿಂತ ನಾವೇನು ಕಡಿಮೆ ಇಲ್ಲ:ನಟಿ ಅಮೂಲ್ಯ - ವಿದ್ಯಾರ್ಥಿಗಳು
ಮಹಾರಾಣಿ ಮಹಿಳಾ ಕಾಲೇಜಿನಲ್ಲಿ ಏರ್ಪಡಿಸಿದ್ದ ಸಾಂಸ್ಕೃತಿಕ ಚಟುವಟಿಕೆಗಳ ಸಮಾರಂಭದಲ್ಲಿ ಮಾತನಾಡಿದ ಅವರು, ಹೆಣ್ಣು ಮಕ್ಕಳು ಮುಂದೆ ಬರಬೇಕಾದರೆ ಧೈರ್ಯ ಹಾಗೂ ಸಹನೆಯನ್ನು ಬೆಳಸಿಕೊಳ್ಳಬೇಕು ಎಂದರು
ನಟಿ ಅಮೂಲ್ಯ
ಮಹಾರಾಣಿ ಮಹಿಳಾ ಕಾಲೇಜಿನಲ್ಲಿ ಏರ್ಪಡಿಸಿದ್ದ ಸಾಂಸ್ಕೃತಿಕ ಚಟುವಟಿಕೆಗಳ ಸಮಾರಂಭದಲ್ಲಿ ಮಾತನಾಡಿದ ಅವರು, ಹೆಣ್ಣು ಮಕ್ಕಳು ಮುಂದೆ ಬರಬೇಕಾದರೆ ಧೈರ್ಯ ಹಾಗೂ ಸಹನೆಯನ್ನು ಬೆಳಸಿಕೊಳ್ಳಬೇಕು. ಸಮಾಜದಲ್ಲಿ ಎಲ್ಲ ಕ್ಷೇತ್ರದಲ್ಲಿ ಮುನ್ನುಗಿ ಗುರಿ ಸಾಧಿಸಿ ತೋರಿಸಬೇಕು ಎಂದು ಹೇಳಿದ್ರು.
ಹೆಣ್ಣು ಮಕ್ಕಳು ಮನೆಯಲ್ಲಿ ಕುಳಿತು ಕೊಳ್ಳುವುದರ ಬದಲು ಸಾಧನೆ ಮಾಡಲು ಮುಂದೆ ಬರಬೇಕು. ಪುರುಷರಿಗಿಂತ ನಮ್ಮ ಶಕ್ತಿ ಕಡಿಮೆ ಇಲ್ಲ ಎಂಬಂತೆ ಸಾಧನೆಯ ಮಾರ್ಗವನ್ನು ಕಂಡುಕೊಳ್ಳಬೇಕು ಎಂದು ತಿಳಿಸಿದ್ರು.