ಕರ್ನಾಟಕ

karnataka

ETV Bharat / briefs

ಕಾಲುಜಾರಿ ಬಿದ್ದು ಚೇತರಿಕೆ ಕಾಣದೆ ವ್ಯಕ್ತಿ ಸಾವು - ಉಡುಮಕಲ್ ಬಿದ್ದು ವ್ಯಕ್ತಿ ಸಾವು

ಉಡುಮಕಲ್-ಗಡ್ಡಿಯಲ್ಲಿ ಆಕಸ್ಮಿಕವಾಗಿ ಕಾಲುಜಾರಿ ಬಿದ್ದು ತಲೆಗೆ ತೀವ್ರ ಪೆಟ್ಟಾಗಿ ಮೂರು ದಿನಗಳ ಬಳಿಕ ಚಿಕಿತ್ಸೆ ಫಲಕಾರಿಯಾಗದೆ ವ್ಯಕ್ತಿಯೊಬ್ಬರು ಸಾವನ್ನಪ್ಪಿದ ಘಟನೆ ಜರುಗಿದೆ.

man dies from falling off the sidewalk
man dies from falling off the sidewalk

By

Published : Jun 2, 2020, 3:33 PM IST

ಗಂಗಾವತಿ: ವ್ಯಕ್ತಿಯೊಬ್ಬ ಆಕಸ್ಮಿಕವಾಗಿ ಕಾಲುಜಾರಿ ಬಿದ್ದು ತಲೆಗೆ ತೀವ್ರ ಸ್ವರೂಪದ ಗಾಯವಾಗಿ ಮೂರು ದಿನಗಳ ಬಳಿಕ ಸಾವನ್ನಪ್ಪಿದ ಘಟನೆ ತಾಲೂಕಿನ ವೆಂಕಟಗಿರಿ ಹೋಬಳಿಯ ಉಡುಮಕಲ್ ಗಡ್ಡಿಯಲ್ಲಿ ಸಂಭವಿಸಿದೆ.

ಮೃತನನ್ನು ಹನುಮಂತಪ್ಪ ಬನ್ನೆಮ್ಮ (55) ಉಡುಮಕಲ್ ಗಡ್ಡಿ ಎಂದು ಗುರುತಿಸಲಾಗಿದೆ. ಮೇ 31ರಂದು ರಾತ್ರಿ ಮನೆಯಲ್ಲಿ ಊಟ ಮಾಡುತ್ತಿದ್ದಾಗ ತಟ್ಟೆ ಸಮೇತ ಎದ್ದು ನಿಂತ ಸಂದರ್ಭದಲ್ಲಿ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದಿದ್ದಾನೆ.

ಬಿದ್ದ ರಭಸಕ್ಕೆ ತಲೆಗೆ ಪೆಟ್ಟಾದ ಹಿನ್ನೆಲೆಯಲ್ಲಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಎರಡು ದಿನಗಳ ಬಳಿಕ ಚಿಕಿತ್ಸೆ ಫಲಕಾರಿಯಾಗದೆ ವ್ಯಕ್ತಿ ಸಾವನ್ನಪ್ಪಿದ್ದಾನೆ ಎಂದು ಗಂಗಾವತಿ ಗ್ರಾಮೀಣ ಪೊಲೀಸರು ತಿಳಿಸಿದ್ದಾರೆ.

ABOUT THE AUTHOR

...view details