ಕರ್ನಾಟಕ

karnataka

ETV Bharat / briefs

ಸೋಲಿನಿಂದ ಎದೆಗುಂದಬೇಕಿಲ್ಲ,ಎರಡೂ ಪಕ್ಷಗಳೂ ಸೇರಿ ಚರ್ಚಿಸುತ್ತೇವೆ-ಕುಮಾರಸ್ವಾಮಿ - ಎದೆಗುಂದಬೇಡಿ

ಲೋಕಸಭೆ ಚುನಾವಣೆಯಲ್ಲಿ ಹೀನಾಯ ಸೋಲಿನ ಬಗ್ಗೆ ಸಿಎಂ ಕುಮಾರಸ್ವಾಮಿ ಟ್ವಿಟ್ಟರ್ ಮೂಲಕ ಪ್ರತಿಕ್ರಿಯಿಸಿದ್ದಾರೆ.

'ಸೋಲಿಗೆ ಎದೆಗುಂದಬೇಡಿ' ಹೆಚ್‌ಡಿಕೆ

By

Published : May 23, 2019, 5:19 PM IST

ಬೆಂಗಳೂರು: ಲೋಕಸಭಾ ಚುನಾವಣೆಯ ಫಲಿತಾಂಶ ಅನಿರೀಕ್ಷಿತ.ಈ ಫಲಿತಾಂಶವನ್ನು ಗೌರವಿಸುತ್ತೇನೆ ಹಾಗೂ ಮತ್ತೊಮ್ಮೆ ಜನಾದೇಶ ಪಡೆದ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿಯವರಿಗೆ ಅಭಿನಂದನೆಗಳನ್ನು ಸಲ್ಲಿಸುತ್ತೇನೆ ಎಂದು ಸಿಎಂ ಕುಮಾರಸ್ವಾಮಿ ಟ್ವಿಟ್ಟರ್ ಮೂಲಕ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಫಲಿತಾಂಶದ ಬಗ್ಗೆ ಸರಣಿ ಟ್ಪೀಟ್‌ ಮಾಡಿದ ಅವರು,ರಾಜ್ಯದಲ್ಲಿ ಗೆಲುವು ಸಾಧಿಸಿದ ಎಲ್ಲ ಅಭ್ಯರ್ಥಿಗಳಿಗೂ ಶುಭಾಶಯ ಕೋರಿದ್ದಾರೆ.

ಜೆಡಿಎಸ್-ಕಾಂಗ್ರೆಸ್ ಮೈತ್ರಿ ಅಭ್ಯರ್ಥಿಗಳ ಸೋಲಿನ ಕುರಿತು ಎರಡೂ ಪಕ್ಷಗಳ ನಾಯಕರು ಚರ್ಚಿಸುತ್ತೇವೆ.ರಾಜಕೀಯದಲ್ಲಿ ನಮ್ಮ ಪಕ್ಷವು ಹಲವು ಸೋಲು-ಗೆಲುವುಗಳನ್ನು ಕಂಡಿದೆ.ಸೋಲಿನಿಂದ ಪಕ್ಷದ ಕಾರ್ಯಕರ್ತರು ಯಾರೂ ಎದೆಗುಂದಬೇಕಾಗಿಲ್ಲ.ಮುಂದಿನ ದಿನಗಳಲ್ಲಿ ಪಕ್ಷವನ್ನು ಬಲ ಪಡಿಸಲು ಜೊತೆಯಾಗಿ ಶ್ರಮಿಸೋಣ ಎಂದು ಕಾರ್ಯಕರ್ತರಿಗೆ ಸಿಎಂ ಧೈರ್ಯ ತುಂಬಿದ್ದಾರೆ.

ABOUT THE AUTHOR

...view details