ಕರ್ನಾಟಕ

karnataka

ETV Bharat / briefs

ಲಾಕ್​ಡೌನ್ ನಿಯಮ ಉಲ್ಲಂಘನೆ: ಶನಿವಾರ ಬೆಂಗಳೂರಿನಲ್ಲಿ 817 ವಾಹನ ಜಪ್ತಿ

ಅನಗತ್ಯವಾಗಿ ರಸ್ತೆಗಿಳಿದ ವಾಹನ, ಕೋವಿಡ್ ನಿಯಮ‌ ಉಲ್ಲಂಘಿಸಿದವರು ಸೇರಿದಂತೆ ಅನೇಕರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಇನ್ನು ದ್ವಿಚಕ್ರ ವಾಹನ, ಕಾರು, ಆಟೋ ಸೇರಿದಂತೆ ಒಟ್ಟು 817 ವಾಹನಗಳನ್ನ ವಶಕ್ಕೆ ಪಡೆದಿದ್ದಾರೆ‌‌.

bengaluru-police
bengaluru-police

By

Published : Jun 6, 2021, 9:11 AM IST

ಬೆಂಗಳೂರು:ಲಾಕ್‌ಡೌನ್ ಆರಂಭವಾದಾಗಿನಿಂದಲೂ ನಗರ ಪೊಲೀಸರು ಕಾರ್ಯಾಚರಣೆ ನಡೆಸಿ ವಾಹನ ಜಪ್ತಿ ಮಾಡುತ್ತಿದ್ದಾರೆ.

ಅನಗತ್ಯವಾಗಿ ರಸ್ತೆಗಿಳಿದ ವಾಹನ, ಕೋವಿಡ್ ನಿಯಮ‌ ಉಲ್ಲಂಘಿಸಿದವರು ಸೇರಿದಂತೆ ಅನೇಕರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಶನಿವಾರ ಬೆಳಗ್ಗೆ 10 ಗಂಟೆಯಿಂದ ರಾತ್ರಿ 8 ಗಂಟೆಯವರೆಗೆ ಪೊಲೀಸರು ಕಾರ್ಯಾಚರಣೆ ನಡೆಸಿದ್ದು, ದ್ವಿಚಕ್ರ ವಾಹನ, ಕಾರು, ಆಟೋ ಸೇರಿದಂತೆ ಒಟ್ಟು 817 ವಾಹನಗಳನ್ನ ವಶಕ್ಕೆ ಪಡೆದಿದ್ದಾರೆ‌‌. ಇದರಲ್ಲಿ ದ್ವಿಚಕ್ರ ವಾಹನ 723, ಆಟೋ 39, ಕಾರು 70 ಸೇರಿವೆ.

ಬೆಂಗಳೂರಿನಾದ್ಯಂತ ಒಟ್ಟು 832 ವಾಹನಗಳು ವಶಕ್ಕೆ ಪಡೆಯಲಾಗಿದೆ. ಇನ್ನು 15 ಮಂದಿಯ ಮೇಲೆ ಕೋವಿಡ್ ನಿಯಮ ಉಲ್ಲಂಘಿಸಿದ ಹಿನ್ನೆಲೆಯಲ್ಲಿ NDMA ಕಾಯ್ದೆ ಅಡಿ ಪ್ರಕರಣ ದಾಖಲಿಸಲಾಗಿದೆ.

ABOUT THE AUTHOR

...view details