ನವದೆಹಲಿ/ಜೈಪುರ: ಭಾರತಕ್ಕೆ 2 ವಿಶ್ವಕಪ್ ಗೆದ್ದುಕೊಡುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಮಾಜಿ ಕ್ರಿಕೆಟಿಗ ಗೌತಮ್ ಗಂಭೀರ್ ತಮ್ಮ ಮೊದಲ ಚುನಾವಣೆಯಲ್ಲೇ ಭರ್ಜರಿ ಜಯ ಸಾಧಿಸಿದ್ದಾರೆ.
ಪೂರ್ವ ದೆಹಲಿಯಿಂದ ಸ್ಪರ್ಧಿಸಿದ್ದ ಗಂಭೀರ್ ಪ್ರತಿಸ್ಪರ್ಧಿಗಳಾದ ಕಾಂಗ್ರೆಸ್ನ ಅರ್ವಿಂದರ್ ಸಿಂಗ್ ಹಾಗೂ ಎಎಪಿಯ ಅತಿಶಿ ವಿರುದ್ಧ 2,38 ಲಕ್ಷ ಮತಗಳಿಂದ ಭರ್ಜರಿ ಜಯ ಸಾಧಿಸಿದ್ದಾರೆ.
ರಾಜ್ಯವರ್ಧನ್ ಸಿಂಗ್ ರಾಥೋಡ್ಗೆ ಜಯ:
ಜೈಪುರ ಗ್ರಾಮೀಣ ಕ್ಷೇತ್ರದಿಂದ ಸ್ಪರ್ಧಿಸಿದ್ದ ಹಾಲಿ ಕ್ರೀಡಾ ಸಚಿವ ರಾಜ್ಯವರ್ಧನ್ ಸಿಂಗ್ ರಾಥೋಡ್ ಕಾಂಗ್ರೆಸ್ನಿಂದ ಸ್ಪರ್ಧಿಸಿದ್ದ ರಾಷ್ಟ್ರೀಯ ಡಿಸ್ಕಸ್ ಥ್ರೋನಲ್ಲಿ ಮೂರು ಬಾರಿ ಒಲಿಂಪಿಕ್ನಲ್ಲಿ ಸ್ಪರ್ಧಿಸಿದ್ದ ಕೃಷ್ಣ ಪೂನಿಯಾ ವಿರುದ್ಧ 1.3 ಲಕ್ಷಕ್ಕೂ ಹೆಚ್ಚು ಮತಗಳಿಂದ ಭರ್ಜರಿ ಜಯ ಸಾಧಿಸುವ ಮೂಲ ಸತತ ಎರಡನೇ ಬಾರಿ ಸಂಸತ್ ಪ್ರವೇಶಿಸಿದ್ದಾರೆ.
ವಿಜೇಂದರ್ ಸಿಂಗ್ಗೆ ಸೋಲು:
ಕಾಂಗ್ರೆಸ್ನಿಂದ ದಕ್ಷಿಣ ದೆಹಲಿಯಿಂದ ಸ್ಪರ್ಧಿಸಿದ್ದ ಬಾಕ್ಸರ್ ವಿಜೇಂದರ್ ಸಿಂಗ್ ಮೂರನೇ ಸ್ಥಾನ ಪಡೆದು ತಮ್ಮ ತಾಕತ್ತು ರಿಂಗ್ನಲ್ಲಿ ಮಾತ್ರ ರಾಜಕೀಯದಲ್ಲಲ್ಲ ಎಂಬುದನ್ನು ಅರಿತುಕೊಂಡಿದ್ದಾರೆ.
ದಕ್ಷಿಣ ದೆಹಲಿಯಲ್ಲಿ ಬಿಜೆಪಿಯ ರಮೇಶ್ ಬಾದುರಿ 50 ಸಾವಿರಕ್ಕೂ ಹೆಚ್ಚಿನ ಮತಗಳಿಂದ ಎಎಪಿಯ ರಾಘವ್ ಚಂದ ವಿರುದ್ಧ ಜಯ ಸಾಧಿಸಿದ್ದಾರೆ.