ಕರ್ನಾಟಕ

karnataka

ETV Bharat / briefs

ಮಾಜಿ ಶಾಸಕ ಸತ್ಯನಾರಾಯಣ ವಿಧಿವಶ: ಕಂಬನಿ ಮಿಡಿದ ರಾಜಕೀಯ ಗಣ್ಯರು - former minister satyanaraya

ಮಾಜಿ ಶಾಸಕ ಸತ್ಯನಾರಾಯಣ ಅವರ ಅಂತಿಮ ದರ್ಶನ ಪಡೆದ ರಾಜಕೀಯ ಗಣ್ಯರು; ಕಂಬನಿ ಮಿಡಿದ ಆಪ್ತ ಬಳಗ

ಮಾಜಿ ಶಾಸಕ ಸತ್ಯನಾರಾಯಣ ಅವರ ಅಂತಿಮ ದರ್ಶನಕ್ಕೆ ರಾಜಕೀಯ ಗಣ್ಯರ ಆಗಮನ

By

Published : Jun 7, 2019, 5:50 PM IST

ಮೈಸೂರು: ಚಾಮುಂಡೇಶ್ವರಿ ಕ್ಷೇತ್ರದ ಮಾಜಿ ಶಾಸಕ ಸತ್ಯನಾರಾಯಣ ಅವರ ನಿಧನಕ್ಕೆ ಗಣ್ಯರು ಕಂಬನಿ ಮಿಡಿದಿದ್ದಾರೆ. ಸತ್ಯನಾರಾಯಣ ಅವರ ಅಂತಿಮ ದರ್ಶನದ ಬಳಿಕ ಪ್ರತಿಕ್ರಿಯಿಸಿದ ಸಂಸದ ವಿ. ಶ್ರೀನಿವಾಸ್ ಪ್ರಸಾದ್, ರಾಜಕೀಯದಲ್ಲಿ ಶುದ್ಧ ಚಾರಿತ್ರ್ಯ ಇರುವ ಸತ್ಯನಾರಾಯಣ ಅವರಂತ ವ್ಯಕ್ತಿತ್ವದವರು ತುಂಬಾ ವಿರಳ ಅಂತ ಸ್ಮರಿಸಿದರು.

ಮಾಜಿ ಶಾಸಕ ಸತ್ಯನಾರಾಯಣ ಅವರ ಅಂತಮ ದರ್ಶನ

ಸತ್ಯನಾರಾಣಯ ಅವರಂತ ಸಜ್ಜನ ಹಾಗೂ ಪ್ರಾಮಾಣಿಕ ರಾಜಕಾರಣಿಯನ್ನು ಕಳೆದುಕೊಂಡಿರುವುದು ತುಂಬ ನೋವಿನ ಸಂಗತಿ ಎಂದರು.

ಮೈಸೂರು ತಾಲೂಕಿನ ಇಲವಾಲ ಹೋಬಳಿಯ ಗುಂಗ್ರಾಲ್ ಛತ್ರ ಗ್ರಾಮದ ಸತ್ಯನಾರಾಯಣ ಅವರ ನಿವಾಸದಲ್ಲಿ ಸಾರ್ವಜನಿಕರು ಹಾಗೂ ಗಣ್ಯರಿಗೆ ಅಂತಿಮ ದರ್ಶನದ ವ್ಯವಸ್ಥೆ ಮಾಡಲಾಗಿದ್ದು, ಸಚಿವರಾದ ಸಾ.ರಾ.ಮಹೇಶ್, ಜಿ.ಟಿ.ದೇವೇಗೌಡ, ಸಂಸದ ಪ್ರತಾಪಸಿಂಹ, ಶಾಸಕರಾದ ಎಚ್‌.ವಿಶ್ವನಾಥ್, ತನ್ವೀರ್ ಸೇಠ್, ಮಾಜಿ ಶಾಸಕ ಕೆ.ವೆಂಕಟೇಶ್, ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಸದಸ್ಯರು ಸೇರಿದಂತೆ ರಾಜಕೀಯ ಮುಖಂಡರು ಅಂತಿಮ ದರ್ಶನ ಪಡೆದರು.

ABOUT THE AUTHOR

...view details