ಯಾದಗಿರಿ:ತಾಲೂಕು ಪಂಚಾಯತ್ ಮಾಜಿ ಸದಸ್ಯನೊಬ್ಬನ ಮನೆಯಲ್ಲಿ ಅಕ್ರಮ ಗಾಂಜಾ ವಶಪಡಿಸಿಕೊಂಡ ಘಟನೆ ನಡೆದಿದೆ.
ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ರಸ್ತಾಪುರ ಗ್ರಾಮದ ಮನೆಯೊಂದರಲ್ಲಿ ಅಬಕಾರಿ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ ಅಕ್ರಮ ಗಾಂಜಾ ವಶಪಡಿಸಿಕೊಂಡಿದ್ದಾರೆ.

ಶಹಾಪುರ ತಾಲೂಕು ಪಂಚಾಯತ್ ಮಾಜಿ ಸದಸ್ಯ ಶರಬಣ್ಣ ಟಣಕೆದಾರ ಎಂಬುವರ ಮನೆಯಲ್ಲಿ ಅಕ್ರಮವಾಗಿ ಗಾಂಜಾ ಸಂಗ್ರಹಿಸಿದ್ದ ಹಿನ್ನೆಲೆಯಲ್ಲಿ ಅಬಕಾರಿ ಇಲಾಖೆ ನಿರೀಕ್ಷಕ ಮುಜಾವರ್ ನೇತೃತ್ವದಲ್ಲಿ ದಾಳಿ ನಡೆಸಿ ವಶಪಡಿಸಿಕೊಳ್ಳಲಾಗಿದೆ.
ಸುಮಾರು ಎರಡು ಲಕ್ಷ ರೂಪಾಯಿ ಮೌಲ್ಯದ ಗಾಂಜಾವನ್ನು ವಶಪಡಿಸಿಕೊಂಡಿದ್ದು, ಆರೋಪಿ ಶರಬಣ್ಣ ಪರಾರಿಯಾಗಿದ್ದಾನೆ. ಅಬಕಾರಿ ಇಲಾಖೆ ಅಧಿಕಾರಿಗಳು ಎನ್ ಡಿಪಿಎಸ್ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಮುಂದುವರಿಸಿದ್ದಾರೆ.