ತಿರುವನಂತಪುರ:ಮಲಯಾಳಂ ಚಿತ್ರನಟ ಉನ್ನಿದೇವ್ ಅವರನ್ನು ಪತ್ನಿ ಸಾವಿನ ಪ್ರಕರಣದಲ್ಲಿ ಬಂಧಿಸಲಾಗಿದೆ. ಪತ್ನಿ ಆತ್ಮಹತ್ಯೆಗೆ ಪ್ರಚೋದನೆ ನೀಡಿದ್ದಾರೆ ಎಂದು ಆರೋಪಿಸಿ ಸ್ಥಳೀಯ ನ್ಯಾಯಾಲಯ ಆರೋಪಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.
ಪ್ರಿಯಾಂಕಾ ಮೇ 12 ರಂದು ಆತ್ಮಹತ್ಯೆಗೆ ಶರಣಾಗಿದ್ದರು. ಈ ಹಿನ್ನೆಲೆಯಲ್ಲಿ ಉನ್ನಿದೇವ್ ಅವರನ್ನು ಮಂಗಳವಾರ ಪೊಲೀಸರು ಬಂಧಿಸಿದ್ದರು. ಇದಕ್ಕೆ ಒಂದು ದಿನದ ಮುಂಚಿತವಾಗಿ ಆಕೆ ಗಂಡನ ವಿರುದ್ಧ ಕೌಟುಂಬಿಕ ದೌರ್ಜನ್ಯ ಪ್ರಕರಣ ದಾಖಲಿಸಿದ್ದರು. ಆದರೆ ಮರುದಿನ ಸಾವಿಗೆ ಶರಣಾಗಿದ್ದರು. ಕೆಲವು ಮಲಯಾಳಂ ಚಿತ್ರಗಳಲ್ಲಿ ನಟಿಸಿರುವ ಉನ್ನಿದೇವ್, ಪತ್ನಿಯ ಮೇಲೆ ದೌರ್ಜನ್ಯ ಎಸಗುತ್ತಿದ್ದ ಆರೋಪ ಎದುರಿಸುತ್ತಿದ್ದಾರೆ.