ಧಾರವಾಡ:ರಾಜ್ಯದಲ್ಲಿ ಲಾಕ್‌ಡೌನ್ ಜಾರಿ ವಿಚಾರವಾಗಿ ಸದ್ಯ ಮೇ 4ರವರೆಗೆ ಕಠಿಣ ನಿಯಮ ಇರಲಿದೆ. ಮುಂದಿನ ವಾರವೂ ವೀಕೆಂಡ್ ಕರ್ಫ್ಯೂ ಇರತ್ತೆ ಎಂದು ಧಾರವಾಡದಲ್ಲಿ ಕೈಗಾರಿಕಾ ಸಚಿವ ಜಗದೀಶ ಶೆಟ್ಟರ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉಳಿದ ದಿನದ ಕರ್ಫ್ಯೂ ಬಗ್ಗೆ ಚರ್ಚೆ ನಡೆದಿದೆ. ಲಾಕ್‌ಡೌನ್ ಬಗ್ಗೆಯೂ ಚರ್ಚೆ ನಡೀತಾ ಇದೆ. ನಾಳೆಯ ಕ್ಯಾಬಿನೆಟ್ ಸಭೆಯಲ್ಲಿ ಇದು ಚರ್ಚೆ ಆಗಲಿದೆ. ನಾಳೆ ಬೆಳಗ್ಗೆ 11ಕ್ಕೆ ಕ್ಯಾಬಿನೆಟ್ ಸಭೆ ಇದೆ. ಕ್ಯಾಬಿನೆಟ್‌ನಲ್ಲಿ ಸಿಎಂ ಮುಂದಿನ ನಿರ್ಧಾರ ತಗೋತಾರೆ ಎಂದರು.