ಕರ್ನಾಟಕ

karnataka

ETV Bharat / briefs

ಚಿಕ್ಕಮಗಳೂರಿನಲ್ಲಿ ಕೊರೊನಾ ಮುಂಜಾಗ್ರತಾ ಕ್ರಮಗಳ ಕುರಿತು ಸಚಿವ ಅಂಗಾರ ಪರಿಶೀಲನೆ - chikkamagaluru Corona news

ಚಿಕ್ಕಮಗಳೂರು ಜಿಲ್ಲೆಯಲ್ಲಿ ಕೊರೊನಾ ಮುಂಜಾಗೃತಾ ಕ್ರಮಗಳ ಚರ್ಚೆ ನಡೆಸಿದ್ದೇನೆ. ಕೊರೊನಾ ಸಂಬಂಧ ಏನೆಲ್ಲಾ ಕ್ರಮ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳ ಜೊತೆ ಮಾತುಕತೆ ನಡೆಸಿದ್ದೇನೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಅಂಗಾರ ಸಭೆ ಹೇಳಿದರು.

Minister Angara reviews of corona measures in Chikkamagaluru
Minister Angara reviews of corona measures in Chikkamagaluru

By

Published : Jun 4, 2021, 9:52 PM IST

ಚಿಕ್ಕಮಗಳೂರು:ಜಿಲ್ಲೆಯಲ್ಲಿ ಕೊರೊನಾ ಮೂರನೇ ಹಂತಕ್ಕೆ ಸಿದ್ದತೆ ಮಾಡಿಕೊಳ್ಳುತ್ತಿದ್ದು, ಆ ಕುರಿತಂತೆ ಅಧಿಕಾರಿಗಳ ಜೊತೆ ಜಿಲ್ಲಾ ಉಸ್ತುವಾರಿ ಸಚಿವ ಅಂಗಾರ ಸಭೆ ನಡೆಸಿದ್ದಾರೆ.

ಈ ವೇಳೆ ಮಾತನಾಡಿದ ಅವರು, ಗ್ರಾಮಾಂತರ ಪ್ರದೇಶದಲ್ಲಿ ಕೊರೊನಾ ಹೆಚ್ಚಾಗುತ್ತಿದ್ದು, ಈ ಕುರಿತು ಏನೆಲ್ಲಾ ಕಾರ್ಯಕ್ರಮ ನಡೆಯುತ್ತಿದೆ, ವೈದ್ಯರ ನಡೆ ಹಳ್ಳಿಯ ಕಡೆ ಮತ್ತು ಮುಂಜಾಗೃತ ಕ್ರಮ ಸೇರಿದಂತೆ ಅನೇಕ ವಿಚಾರಗಳ ಬಗ್ಗೆ ಚರ್ಚೆ ನಡೆಸಿದ್ದೇವೆ ಎಂದರು.

ನನಗೆ ಸಚಿವ ಸ್ಥಾನ ಸಿಕ್ಕ ನಂತರ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿ ಸುತ್ತಾಡಿದ್ದೇನೆ. ಗ್ರಾಮ ಪಂಚಾಯಿತಿಗಳ ಸಮಸ್ಯೆಗಳ ಕುರಿತು ಚರ್ಚೆ ಮಾಡಿದ್ದೇನೆ. ವ್ಯಾಕ್ಸಿನ್ ಬಗ್ಗೆ ಕಾಂಗ್ರೆಸ್​ ಮಾಡಿದ ಅಪಪ್ರಚಾರದಿಂದ ನಿಧಾನವಾಗಿದೆ. ಈಗಾಗಲೇ ರಾಜ್ಯ ಸರ್ಕಾರ ಮೂರು ಕೋಟಿ ವ್ಯಾಕ್ಸಿನ್ ತೆಗೆದುಕೊಂಡಿದೆ. ವ್ಯಾಕ್ಸಿನ್ ದುರ್ಬಳಕೆ ಆಗಲು ಸಾಧ್ಯವಿಲ್ಲ. ವಯೋಮೀತಿಗೆ ಅನುಗುಣವಾಗಿ ವ್ಯಾಕ್ಸಿನ್ ನೀಡಲಾಗುತ್ತಿದ್ದು, ವ್ಯಾಕ್ಸಿನ್ ನೀಡುವುದು ಸರಿಯಾಗಿಯೇ ನಡೆಯುತ್ತಿದೆ ಎಂದರು.

ABOUT THE AUTHOR

...view details