ಬೀದರ್ ನೂತನ ಜಿಲ್ಲಾಧಿಕಾರಿಗಳಿಗೆ ಸಚಿವ ಚವ್ಹಾಣ ಅಭಿನಂದನೆ - ಹೊಸ ಬೀದರ್ ಜಿಲ್ಲಾಧಿಕಾರಿಗಳು
ಸಚಿವ ಪ್ರಭು ಚವ್ಹಾಣ ಅವರು ಬೀದರ್ ಜಿಲ್ಲೆಯ ನೂತನ ಜಿಲ್ಲಾಧಿಕಾರಿಗಳನ್ನು ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ್ದು, ಪ್ರಸ್ತುತ ವಿದ್ಯಮಾನಗಳ ಕುರಿತು ಸಮಾಲೋಚನೆ ನಡೆಸಿದರು.
Minister Chawna congratulates Bidar district new Deputy Commissioner
ಬೀದರ್: ನೂತನ ಜಿಲ್ಲಾಧಿಕಾರಿಯಾಗಿ ನೇಮಕಗೊಂಡ ರಾಮಚಂದ್ರ ಅವರನ್ನು ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವ್ಹಾಣ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದರು.
ಬಳಿಕ ಜಿಲ್ಲೆಯ ಸಮಗ್ರ ಅಭಿವೃದ್ಧಿ ಜೊತೆಗೆ ಕೊವಿಡ್-19 ವೈರಾಣು ನಿಯಂತ್ರಣ ಮಾಡುವಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಚರ್ಚಿಸಿದರು.
ಗಡಿ ಭಾಗದ ಜಿಲ್ಲೆಯಾಗಿರುವುದರಿಂದ ಮಹಾರಾಷ್ಟ್ರ ಹಾಗೂ ತೆಲಂಗಾಣ ಭಾಗದ ನಿಕಟ ಸಂಪರ್ಕ ಇರುವುದರಿಂದ ಈ ಭಾಗದ ಅಭಿವೃದ್ಧಿಗೆ ಸಹಕರಿಸುವುದಾಗಿ ಸಚಿವ ಪ್ರಭು ಚವ್ಹಾಣ ಭರವಸೆ ಕೊಟ್ಟರು.