ಕರ್ನಾಟಕ

karnataka

ETV Bharat / briefs

10 ದಿನದಲ್ಲಿ 69 ಸಾವಿರ ಮಂದಿಗೆ ಟೆಸ್ಟ್​, ಎಲ್ಲೆಂದರಲ್ಲಿ ಓಡಾಡುವ ಸೋಂಕಿತರ ಮೇಲೆ ಕ್ರಮ: ಮಾಧುಸ್ವಾಮಿ - ತುಮಕೂರು ಜಿಲ್ಲೆ ಸುದ್ದಿ

ತುಮಕೂರಿನಲ್ಲಿ 69 ಸಾವಿರ ಮಂದಿಗೆ ಕೊರೊನಾ ಪರೀಕ್ಷೆ ನಡೆಸಲಾಗಿದ್ದು, ಅದ್ರಲ್ಲಿ 6,985 ಮಂದಿಗೆ ಸೋಂಕು ಇರುವುದು ದೃಢಪಟ್ಟಿದೆ

Minister Madhuswami
Minister Madhuswami

By

Published : Apr 22, 2021, 9:29 PM IST

Updated : Apr 23, 2021, 3:10 PM IST

ತುಮಕೂರು:ಜಿಲ್ಲೆಯಲ್ಲಿ ಕಳೆದ 10 ದಿನಗಳಿಂದ 69 ಸಾವಿರ ಮಂದಿಗೆ ಕೊರೊನಾ ಪರೀಕ್ಷೆ ನಡೆಸಲಾಗಿದ್ದು, ಅದ್ರಲ್ಲಿ 6,985 ಮಂದಿಗೆ ಸೋಂಕು ಇರುವುದು ದೃಢಪಟ್ಟಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ. ಮಾಧುಸ್ವಾಮಿ ತಿಳಿಸಿದ್ದಾರೆ.

ತುಮಕೂರಿನಲ್ಲಿ ಪತ್ರಕರ್ತರೊಂದಿಗೆ ಮಾತನಾಡಿ, ಶೇ.15ರಷ್ಟು ಮಂದಿಯಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾಗಿವೆ. ಸ್ವಲ್ಪ ಗಂಭೀರ ಸ್ಥಿತಿಗೆ ತಲುಪಿದ್ದು, ಆದ್ರೂ ಧೃತಿಗೆಡುವ ಅಗತ್ಯವಿಲ್ಲ. ಸಾರ್ವಜನಿಕರು ಹತಾಶರಾಗಬೇಕಿಲ್ಲ. ಅದ್ರಲ್ಲೂ ವಯೋವೃದ್ಧರು, ಖಾಯಿಲೆಗಳಿಂದ ಬಳಲುತ್ತಿರುವವರನ್ನು ಉಳಿಸಲು ಸಾಧ್ಯವಾಗಿಲ್ಲ ಎಂದರು.

ಸೋಂಕಿನ ಗುಣಲಕ್ಷಣಗಳಿರುವವರು ಮುಂಚಿತವಾಗಿ ಬಂದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಬೇಕು. ನಂತರದಲ್ಲಿ ಬಂದವರಿಗೆ ಚಿಕಿತ್ಸೆ ನೀಡಲು ತೊಂದರೆಯಾಗುತ್ತಿದೆ. ಸಾರ್ವಜನಿಕರು ಸಹಕರಿಸಬೇಕು ಎಂದರು.

ಸಚಿವ ಮಾಧುಸ್ವಾಮಿ

ಸೋಂಕು ತಗುಲಿದವರೆಲ್ಲಾ ವಿಷಮ ಪರಿಸ್ಥಿತಿಗೆ ಬರುತ್ತದೆ ಎಂದು ಭಾವಿಸಬೇಕಿಲ್ಲ. ಅಧಿಕಾರಿಗಳೊಂದಿಗೆ ಚರ್ಚಿಸಲಾಗಿದೆ. ಖಾಸಗಿ ಆಸ್ಪತ್ರೆಗಳು, ಮೆಡಿಕಲ್ ಕಾಲೇಜುಗಳೊಂದಿಗೆ ಚರ್ಚಿಸಿ ಸಹಕರಿಸುವಂತೆ ತಿಳಿಸಲಾಗಿದೆ ಎಂದಿದ್ದಾರೆ.

ಸೋಂಕಿತರ ಮೇಲೆ ಕಠಿಣ ಕ್ರಮ:

ಕೋವಿಡ್19 ದೃಢಪಟ್ಟು ಹೋಂ ಐಸೋಲೇಷನಲ್ಲಿರುವ ಸೋಂಕಿತರು ಎಲ್ಲೆಂದರಲ್ಲಿ ಓಡಾಡುತ್ತಿರುವ ಬಗ್ಗೆ ದೂರುಗಳು ಕೇಳಿ ಬರುತ್ತಿವೆ. ಹಾಗಾಗಿ ಹೋಂ ಐಸೋಲೇಷನ್ ಬದಲಾಗಿ ಈ ಸೋಂಕಿತರನ್ನು ಕೋವಿಡ್ ಕೇರ್ ಸೆಂಟರ್​ಗೆ ಸ್ಥಳಾಂತರಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಮಾಧುಸ್ವಾಮಿ ತಿಳಿಸಿದರು.

ತುಮಕೂರಿನ ಕ್ಯಾತ್ಸಂದ್ರದಲ್ಲಿ ಕೋವಿಡ್ ಕೇರ್ ಸೆಂಟರ್ ಅನ್ನು ಕಳೆದ ಬಾರಿಯಂತೆಯೇ ಈ ಬಾರಿಯೂ ಆರಂಭಿಸಲು ಕ್ರಮ ಕೈಗೊಳ್ಳಲಾಗಿದೆ. ಪ್ರತಿ ತಾಲೂಕಿನಲ್ಲಿ 200 ಹಾಸಿಗೆಗಳ ಕೋವಿಡ್ ಕೇರ್ ಸ್ಥಾಪಿಸಲು ಕಳೆದ ಬಾರಿ ಬಳಸಿಕೊಂಡಿದ್ದ ವಸತಿ ನಿಲಯಗಳನ್ನು ಬಳಸಿಕೊಳ್ಳಲು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಕೋವಿಡ್ ಕೇರ್​​ ಸೆಂಟರ್​ಗಳಲ್ಲಿ ಜಿಲ್ಲಾಡಳಿತದಿಂದ ಗುಣಮಟ್ಟದ ಆಹಾರ ಪೂರೈಕೆ ಮಾಡಲಾಗುವುದು ಎಂದರು.

ಕೋವಿಡ್ ನಿಯಂತ್ರಣಕ್ಕಾಗಿ ಸಾರ್ವಜನಿಕರ ಸಹಕಾರ ಅತ್ಯಗತ್ಯ. ಜಿಲ್ಲೆಯ ಜನರು ಸರ್ಕಾರ ಜಾರಿಗೊಳಿಸಿರುವ ಮಾರ್ಗಸೂಚಿಗಳನ್ನು ಪಾಲನೆ ಮಾಡಬೇಕು. ಸೋಂಕು ನಿಯಂತ್ರಣಕ್ಕೆ ಎಲ್ಲರೂ ಸಹಕರಿಸಬೇಕು ಎಂದು ಮನವಿ ಮಾಡಿದರು.

ಗ್ರಾಮೀಣ ಭಾಗಗಳಲ್ಲಿ ಟೆಸ್ಟ್ ಮಾಡಲು ಲ್ಯಾಬ್ ಆನ್ ವೀಲ್ ವಾಹನವನ್ನು ಜಿಲ್ಲೆಯಲ್ಲಿ ಬಳಕೆ ಮಾಡಲು ಕ್ರಮ ಕೈಗೊಳ್ಳಲಾಗಿದೆ. ಈ ವ್ಯವಸ್ಥೆಯಿಂದ ಸೋಂಕಿತರನ್ನು ಶೀಘ್ರ ಪತ್ತೆ ಹಚ್ಚಲು ನೆರವಾಗಲಿದೆ ಎಂದು ಅವರು ತಿಳಿಸಿದರು.

Last Updated : Apr 23, 2021, 3:10 PM IST

ABOUT THE AUTHOR

...view details