ಬೆಂಗಳೂರು :ರಾಜ್ಯದಲ್ಲಿ ಕೋವಿಡ್- 19 ನಿಯಂತ್ರಣಕ್ಕಾಗಿ ಇಲಾಖೆಯ ವತಿಯಿಂದ ಹೊಸ ಕಾರ್ಯಕ್ರಮ ರೂಪಿಸುವ ಸಂಬಂಧ ಗಣಿ ಮತ್ತು ಭೂವಿಜ್ಞಾನ ಸಚಿವ ಮುರುಗೇಶ್ ನಿರಾಣಿ ಅವರ ನೇತೃತ್ವದಲ್ಲಿ ಇಂದು ಅಧಿಕಾರಿಗಳ ಸಭೆ ನಡೆಸಲಾಯಿತು.
ಕೋವಿಡ್ ನಿಯಂತ್ರಣಕ್ಕೆ ಕಾರ್ಯಕ್ರಮ ಆಯೋಜನೆ : ಅಧಿಕಾರಿಗಳ ಸಭೆ ನಡೆಸಿದ ಸಚಿವ ನಿರಾಣಿ - meeting for control corona
ಈಗಾಗಲೇ ಆಕ್ಸಿಜನ್ ಪೂರೈಕೆ, ಅಗತ್ಯವಿರುವ ಕಡೆ ವೈದ್ಯಕೀಯ ಸೌಲಭ್ಯಕ್ಕಾಗಿ ಜಿಲ್ಲಾ ಖನಿಜ ನಿಧಿ ಬಳಕೆ ಸೇರಿದಂತೆ ಹಲವು ಯೋಜನೆಗಳನ್ನು ಅನುಷ್ಠಾನಕ್ಕೆ ತಂದಿದ್ದೇವೆ..
![ಕೋವಿಡ್ ನಿಯಂತ್ರಣಕ್ಕೆ ಕಾರ್ಯಕ್ರಮ ಆಯೋಜನೆ : ಅಧಿಕಾರಿಗಳ ಸಭೆ ನಡೆಸಿದ ಸಚಿವ ನಿರಾಣಿ Murugesh Nirani](https://etvbharatimages.akamaized.net/etvbharat/prod-images/768-512-06:45:57:1621948557-kn-bng-03-minister-murugesh-nirani-meeting-script-7208083-25052021184159-2505f-1621948319-16.jpg)
Murugesh Nirani
ವಿಕಾಸಸೌಧದಲ್ಲಿ ನಡೆದ ಸಭೆಯಲ್ಲಿ ಗಣಿ ಇಲಾಖೆಯ ಕಾರ್ಯದರ್ಶಿ ಪಂಕಜ್ ಕುಮಾರ್ ಪಾಂಡೆ, ಗಣಿ ಮತ್ತು ಭೂವಿಜ್ಞಾನ ಇಲಾಖೆಯ ನಿದೇರ್ಶಕ ಪಿ.ಎನ್ .ರವೀಂದ್ರ, ಕರ್ನಾಟಕ ಖನಿಜ ನಿಗಮದ ವ್ಯವಸ್ಥಾಪಕ ನಿದೇರ್ಶಕ ಶಿವಾನಂದ ಕಪಾಸೆ, ಹಟ್ಟಿ ಗೋಲ್ಡ್ ಮೈನ್ಸ್ ವ್ಯವಸ್ಥಾಪಕ ನಿರ್ದೇಶಕ ಪ್ರಬುಲಿಂಗ ಕವಳಿಹಟ್ಟಿ ಸೇರಿದಂತೆ ಮತ್ತಿತರರು ಹಾಜರಿದ್ದರು.
ಈಗಾಗಲೇ ಆಕ್ಸಿಜನ್ ಪೂರೈಕೆ, ಅಗತ್ಯವಿರುವ ಕಡೆ ವೈದ್ಯಕೀಯ ಸೌಲಭ್ಯಕ್ಕಾಗಿ ಜಿಲ್ಲಾ ಖನಿಜ ನಿಧಿ ಬಳಕೆ ಸೇರಿದಂತೆ ಹಲವು ಯೋಜನೆಗಳನ್ನು ಅನುಷ್ಠಾನಕ್ಕೆ ತಂದಿದ್ದೇವೆ ಎಂದು ಸಚಿವರು ಹೇಳಿದ್ದಾರೆ.