ವಿದ್ಯಾರ್ಥಿಗಳಿಗೆ ವಿತರಿಸಲು ಮಾಸ್ಕ್, ಸ್ಯಾನಿಟೈಸರ್ ಹಸ್ತಾಂತರಿಸಿದ ಸಚಿವ ನಾರಾಯಣಗೌಡ - Minister narayana gouda mask distribution
ಕೆ.ಆರ್.ಪೇಟೆ ತಾಲೂಕಿನಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆ ಬರೆಯಲಿರುವ ವಿದ್ಯಾರ್ಥಿಗಳಿಗಾಗಿ ಉಚಿತ ಮಾಸ್ಕ್ ಮತ್ತು ಸ್ಯಾನಿಟೈಸರ್ಅನ್ನು ಸಚಿವ ನಾರಾಯಣಗೌಡ ನೀಡಿದರು.
ಮಂಡ್ಯ:ಎಸ್ಎಸ್ಎಲ್ಸಿ ಪರೀಕ್ಷಾರ್ಥಿಗಳಿಗೆ ಸಚಿವ ನಾರಾಯಣಗೌಡ ಉಚಿತವಾಗಿ ಮಾಸ್ಕ್ ಮತ್ತು ಸ್ಯಾನಿಟೈಸರ್ ನೀಡಿದ್ದಾರೆ.
ಕೆ.ಆರ್.ಪೇಟೆ ತಾಲೂಕಿನಲ್ಲಿ ಒಟ್ಟು 9 ಕೇಂದ್ರಗಳಲ್ಲಿ ಪರೀಕ್ಷೆ ನಡೆಯುತ್ತಿದ್ದು, 3 ಸಾವಿರ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಕೊರೊನಾ ಮುಂಜಾಗ್ರತಾ ದೃಷ್ಟಿಯಿಂದ ಎಲ್ಲಾ ವಿದ್ಯಾರ್ಥಿಗಳಿಗೆ ಸಚಿವರು ಮಾಸ್ಕ್ ನೀಡುತ್ತಿದ್ದು, ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಮಾಸ್ಕ್ ಹಾಗೂ ಸ್ಯಾನಿಟೈಸರ್ ಹಸ್ತಾಂತರಿಸಿದ್ದಾರೆ.
ಶಿಕ್ಷಣ ಇಲಾಖೆ ವಿದ್ಯಾರ್ಥಿಗಳ ಆರೋಗ್ಯ ದೃಷ್ಟಿಯಿಂದ ಕೈಗೊಂಡಿರುವ ಕ್ರಮಗಳ ಕುರಿತು ಸಚಿವರು ಪರಿಶೀಲನೆ ನಡೆಸಿ ಅಧಿಕಾರಿಗಳ ಪೂರ್ವ ಸಿದ್ಧತೆ ಬಗ್ಗೆ ಮಾಹಿತಿ ಪಡೆದುಕೊಂಡರು.
ಜಿಲ್ಲೆಯ ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲೂ ವಿದ್ಯಾರ್ಥಿಗಳಿಗೆ ಮಾಸ್ಕ್ ಹಾಗೂ ಸ್ಯಾನಿಟೈಸರ್ ವಿತರಣೆ ಮಾಡಲು ಶಿಕ್ಷಣ ಇಲಾಖೆ ದಾನಿಗಳ ಮೊರೆ ಹೋಗಿದೆ.