ದಾವಣಗೆರೆ:ಶಾಸಕ ರೇಣುಕಾಚಾರ್ಯ ಪಿಪಿಇ ಕಿಟ್ ಧರಿಸಿ ಕೋವಿಡ್ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಜಿಲ್ಲೆಯ ಹೊನ್ನಾಳಿ ತಾಲೂಕು ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿದ ಶಾಸಕ ರೇಣುಕಾಚಾರ್ಯ, ಕೊರೊನಾ ಸೋಂಕಿತರ ಆರೋಗ್ಯ ಹಾಗೂ ಸ್ವಚ್ಛತೆ ಪರಿಶೀಲನೆ ನಡೆಸಿದರು. ಪಿಪಿಇ ಕಿಟ್ ಧರಿಸಿದ್ದ ಶಾಸಕ ರೇಣುಕಾಚಾರ್ಯ ಇಡೀ ಆಸ್ಪತ್ರೆಯನ್ನು ಸುತ್ತು ಹಾಕಿ ಸೋಂಕಿತರ ಯೋಗಕ್ಷೇಮ ವಿಚಾರಿಸಿ ಕುಂದು ಕೊರತೆಗಳಿದ್ದರೆ ಮಾಹಿತಿ ನೀಡಿ ಎಂದು ತಿಳಿಸಿದರು.