ಎಸ್‌ಎಸ್‌ಎಲ್‌ಸಿ ಪರೀಕ್ಷಾ ಪೂರ್ವ ಸಿದ್ಧತೆ ಪರಿಶೀಲನೆ ಮಾಡಿದ ಶಾಸಕ ರಾಜುಗೌಡ - Yadagiri district news
ಕಕ್ಕೇರಾ ಹೋಬಳಿಯ ಸರ್ಕಾರಿ ಪ್ರೌಢಶಾಲೆಗೆ ಶಾಸಕ ರಾಜುಗೌಡ ಭೇಟಿ ನೀಡಿ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಪೂರ್ವ ಸಿದ್ಧತೆ ಪರಿಶೀಲನೆ ಮಾಡಿದರು.
ಸುರಪುರ :ತಾಲೂಕಿನ ಕಕ್ಕೇರಾ ಹೋಬಳಿಯ ಸರ್ಕಾರಿ ಪ್ರೌಢಶಾಲೆಗೆ ಶಾಸಕ ರಾಜುಗೌಡ ಭೇಟಿ ನೀಡಿ ಹತ್ತನೆ ತರಗತಿ ಪರೀಕ್ಷೆಯ ಪೂರ್ವ ಸಿದ್ಧತೆ ಕುರಿತು ಪರಿಶೀಲನೆ ನಡೆಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಶಾಸಕರು, ಕೊರೊನಾ ವೈರಸ್ ಹಾವಳಿ ಹೆಚ್ಚಾಗಿದ್ದು ಮಕ್ಕಳ ಬಗ್ಗೆ ಹೆಚ್ಚು ನಿಗಾವಹಿಸುವಂತೆ ತಿಳಿಸಿದರು. ಪರೀಕ್ಷಾರ್ಥಿಗಳಿಗೆ ಮಾಸ್ಕ್ ವಿತರಿಸಿ, ಸ್ಯಾನಿಟೈಸರ್ ನೀಡಿ, ಜ್ವರ ಪರೀಕ್ಷೆ ಮಾಡಿ ಸಾಮಾಜಿಕ ಅಂತರ ಕಾಪಾಡುವಂತೆ ನೋಡಿಕೊಳ್ಳಲು ಹಾಗೂ ಆರೋಗ್ಯ ಇಲಾಖೆಯ ಸಹಕಾರ ಪಡೆಯುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಶಾಲೆಗೆ ಇನ್ನೊಮ್ಮೆ ಸ್ಯಾನಿಟೈಸರ್ ಸಿಂಪಡಣೆ ಮಾಡಿಸಿ ಯಾವುದೇ ವಿದ್ಯಾರ್ಥಿಗೆ ಪರೀಕ್ಷಾ ಸಮಯದಲ್ಲಿ ತೊಂದರೆಯಾಗದಂತೆ ನೋಡಿಕೊಳ್ಳುವ ಹೊಣೆ ಎಲ್ಲರ ಮೇಲಿದೆ ಎಂದು ಎಚ್ಚರಿಸಿದರು.