ಕರ್ನಾಟಕ

karnataka

ETV Bharat / briefs

ಲೋಕಸಭೆ ವಿಸರ್ಜನೆಗೆ ಕ್ಯಾಬಿನೆಟ್‌ ಒಪ್ಪಿಗೆ,ಮೇ 30ಕ್ಕೆ ಮೋದಿ ಪ್ರಮಾಣ? - ಹೊಸ ಸರ್ಕಾರ ರಚನೆ

ರಾಷ್ಟ್ರಪತಿ ರಾಮನಾಥ್​ ಕೋವಿಂದ್​ ಭೇಟಿ ಮಾಡಿರುವ ಪ್ರಧಾನಿ ನರೇಂದ್ರ ಮೋದಿ 17ನೇ ಲೋಕಸಭೆ ರಚನೆಗೆ ಅವಕಾಶ ನೀಡುವಂತೆ ಮನವಿ ಮಾಡಿಕೊಂಡಿದ್ದಾರೆ.

ರಾಷ್ಟ್ರಪತಿ ರಾಮನಾಥ್​ ಕೋವಿಂದ್​ ಭೇಟಿ ಮಾಡಿದ ಪ್ರಧಾನಿ

By

Published : May 24, 2019, 7:41 PM IST

ನವದೆಹಲಿ:ಲೋಕಸಭಾ ಚುನಾವಣೆಯಲ್ಲಿ ಐತಿಹಾಸಿಕ ಗೆಲುವು ದಾಖಲಿಸಿರುವ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್​ಡಿಎ, ಹೊಸ ಸರ್ಕಾರ ರಚನೆ ಮಾಡಲು ಸಿದ್ಧತೆ ನಡೆಸುತ್ತಿದೆ.

ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಇಂದು ಎನ್​​ಡಿಎ ಸರ್ಕಾರದ ಕೊನೆಯ ಸಚಿವ ಸಂಪುಟ ಸಭೆ ನಡೆಸಲಾಗಿದ್ದು,ಈ ನಿರ್ಧಾರ ಕೈಗೊಳ್ಳಲಾಗಿದೆ. ಪ್ರಧಾನಿ ಮೋದಿ ರಾಷ್ಟ್ರಪತಿ ರಾಮನಾಥ್​ ಕೋವಿಂದ್​ ಅವರನ್ನು ಭೇಟಿ ಮಾಡಿ,ರಾಜೀನಾಮೆ ಪತ್ರ ಸಲ್ಲಿಕೆ ಮಾಡಿದ್ದಾರೆ. ಈ ವೇಳೆ ರಾಷ್ಟ್ರಪತಿಗಳು, ಅತೀ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ ಬಿಜೆಪಿಗೆ ಸರ್ಕಾರ ರಚನೆಗೆ ಆಹ್ವಾನ ನೀಡಿದ್ದು, 17ನೇ ಲೋಕಸಭಾ ರಚನೆ ಮಾಡಲು ಅನುಮತಿ ನೀಡಿದ್ದಾರೆ.

ಇದಕ್ಕೂ ಮುನ್ನ ಇಂದು ಬೆಳಗ್ಗೆ ಬಿಜೆಪಿ ಹಿರಿಯ ನಾಯಕರಾದ ಎಲ್​.ಕೆ ಆಡ್ವಾಣಿ ಹಾಗೂ ಮುರಳಿ ಮನೋಹರ್​ ಜೋಷಿ ಭೇಟಿಯಾಗಿ ಆಶೀರ್ವಾದ ಪಡೆದರು. ಜೂನ್ 3ಕ್ಕೂ ಮೊದಲು 17ನೇ ಲೋಕಸಭೆ ರಚನೆಯಾಗಬೇಕಿದ್ದು,ಇದಕ್ಕಾಗಿ ಚುನಾವಣಾ ಆಯೋಗದ ಮೂವರು ಆಯುಕ್ತರು ಲೋಕಸಭೆಗೆ ಹೊಸದಾಗಿ ಆಯ್ಕೆಯಾಗಿರುವ ನಿಯೋಜಿತ ಸಂಸದರ ಪಟ್ಟಿಯನ್ನು ರಾಷ್ಟ್ರಪತಿಗೆ ಸಲ್ಲಿಸಲಿದ್ದಾರೆ.

ಮೇ 30ಕ್ಕೆ ಮೋದಿ ಪ್ರಮಾಣ?

ಪ್ರಧಾನಿ ಮೋದಿ ಮೇ 30ಕ್ಕೆ ಮತ್ತೊಂದು ಅವಧಿಗೆ ಪ್ರಧಾನಿಯಾಗಿ ಪ್ರತಿಜ್ಞಾವಿಧಿ ಸ್ವೀಕಾರ ಮಾಡುವ ಸಾಧ್ಯತೆ ಇದೆ ಎನ್ನಲಾಗುತ್ತಿದ್ದು, ಅದಕ್ಕೂ ಮುಂಚಿತವಾಗಿ ತಮ್ಮ ಸಂಸದೀಯ ಕ್ಷೇತ್ರ ಹಾಗೂ ಗುಜರಾತ್​ನ ಗಾಂಧಿನಗರಕ್ಕೆ ಅವರು ಭೇಟಿ ನೀಡಲಿದ್ದಾರೆ ಎಂದು ವಿಶ್ವಸನೀಯ ಸುದ್ದಿ ಮೂಲಗಳು ತಿಳಿಸಿವೆ.

ABOUT THE AUTHOR

...view details