ಪಾಟ್ನಾ: ಬಿಹಾರದ ಮಾಜಿ ಮುಖ್ಯಮಂತ್ರಿ ಜಿತನ್ ರಾಮ್ ಮಾಂಝಿ ಅವರು ಕೋವಿಡ್ ವ್ಯಾಕ್ಸಿನೇಷನ್ ಪ್ರಮಾಣಪತ್ರಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾವಚಿತ್ರ ಮುದ್ರಣವಾಗಿರುವುದನ್ನು ಟೀಕಿಸಿದ್ದಾರೆ.
ವ್ಯಾಕ್ಸಿನ್ ಪ್ರಮಾಣ ಪತ್ರದಲ್ಲಿ ಮೋದಿ ಚಿತ್ರ: ಬಿಹಾರ ಮಾಜಿ ಸಿಎಂ ಟೀಕೆ - ಬಿಹಾರ ಸುದ್ದಿ
ಹಿಂದೂಸ್ತಾನಿ ಅವಂ ಮೋರ್ಚಾ (ಎಚ್‌ಎಎಂ) ಅಧ್ಯಕ್ಷ, ಬಿಹಾರದ ಮಾಜಿ ಮುಖ್ಯಮಂತ್ರಿ ಜಿತನ್ ರಾಮ್ ಮಾಂಝಿ ಅವರು ವ್ಯಾಕ್ಸಿನೇಷನ್ ಪ್ರಮಾಣಪತ್ರಗಳಲ್ಲಿ ಮೋದಿ ಭಾವಚಿತ್ರ ಮುದ್ರಣವಾಗಿರುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
![ವ್ಯಾಕ್ಸಿನ್ ಪ್ರಮಾಣ ಪತ್ರದಲ್ಲಿ ಮೋದಿ ಚಿತ್ರ: ಬಿಹಾರ ಮಾಜಿ ಸಿಎಂ ಟೀಕೆ modi Criticize](https://etvbharatimages.akamaized.net/etvbharat/prod-images/768-512-02:36:42:1621847202-11876691-modi.jpg)
ಹಿಂದೂಸ್ತಾನಿ ಅವಂ ಮೋರ್ಚಾ (ಎಚ್‌ಎಎಂ) ಅಧ್ಯಕ್ಷ ಮಾಂಝಿ ಹಿಂದಿಯಲ್ಲಿ ಟ್ವೀಟ್ ಮಾಡಿದ್ದು, ಈ ಮೂಲಕ ಟೀಕೆ ವ್ಯಕ್ತಪಡಿಸಿದ್ದಾರೆ. ವ್ಯಾಕ್ಸಿನೇಷನ್ ಪ್ರಮಾಣಪತ್ರಗಳಲ್ಲಿ ರಾಜ್ಯಗಳ ಮುಖ್ಯಸ್ಥ ಅಥವಾ ಮುಖ್ಯಮಂತ್ರಿಯವರ ಛಾಯಾಚಿತ್ರವನ್ನು ಮುದ್ರಿಸಬೇಕು ಎಂದು ಅವರು ಸಲಹೆ ನೀಡಿದ್ದಾರೆ.
ಮಾಂಝಿ ಅವರ ಆಕ್ಷೇಪಣೆಯು ಬಿಹಾರದಲ್ಲಿ ಭಾರಿ ಚರ್ಚೆಗೆ ಎಡೆಮಾಡಿಕೊಟ್ಟಿದೆ. ಏಕೆಂದರೆ ಅವರನ್ನು ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಆಪ್ತರು ಎಂದು ಪರಿಗಣಿಸಲಾಗಿದೆ. ಮಾಂಝಿ 2020ರ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಜೆಡಿಯು ನಿಗದಿಪಡಿಸಿದ ಸ್ಥಾನಗಳ ಮೇಲೆ ಹೋರಾಡಿ ಅವುಗಳಲ್ಲಿ ನಾಲ್ಕು ಸ್ಥಾನಗಳನ್ನು ಗೆಲ್ಲುವಲ್ಲಿ ಯಶಸ್ವಿಯಾದರು.
TAGGED:
Vaccination certificate