ನವದೆಹಲಿ :ಜುಲೈನಲ್ಲಿ ಆರಂಭವಾಗುವ ಸಂಸತ್ತಿನ ಮಾನ್ಸೂನ್ ಅಧಿವೇಶನವು ತನ್ನ ಸಾಮಾನ್ಯ ವೇಳಾಪಟ್ಟಿಯಲ್ಲಿ ಪ್ರಾರಂಭವಾಗಲಿದೆ ಎಂದು ಸರ್ಕಾರ ಭರವಸೆ ಹೊಂದಿದೆ ಎಂದು ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ಹೇಳಿದರು.
ಸಾಂಕ್ರಾಮಿಕ ರೋಗ ಪ್ರಾರಂಭವಾದಾಗಿನಿಂದ ಸಂಸತ್ತಿನ ಮೂರು ಅಧಿವೇಶನಗಳನ್ನು ಮೊಟಕುಗೊಳಿಸಲಾಗಿದೆ. ಕಳೆದ ವರ್ಷ ಚಳಿಗಾಲದ ಅಧಿವೇಶನವನ್ನು ಸಹ ರದ್ದುಗೊಳಿಸಲಾಗಿತ್ತು.
ಕಳೆದ ವರ್ಷ ಸಾಮಾನ್ಯವಾಗಿ ಜುಲೈನಲ್ಲಿ ಪ್ರಾರಂಭವಾಗುವ ಮಾನ್ಸೂನ್ ಅಧಿವೇಶನ ಸೆಪ್ಟೆಂಬರ್ನಲ್ಲಿ ಪ್ರಾರಂಭವಾಗಿತ್ತು. ಆದರೆ, ಈ ಬಾರಿ ಜುಲೈನಲ್ಲಿ ಸಾಮಾನ್ಯ ವೇಳಾಪಟ್ಟಿಯ ಪ್ರಕಾರ ಸಂಸತ್ತಿನ ಅಧಿವೇಶನ ನಡೆಯಲಿದೆ ಎಂದು ನಾನು ಭಾವಿಸುತ್ತೇನೆ" ಎಂದು ಜೋಶಿ ತಿಳಿಸಿದರು.
ಈ ವರ್ಷದ ಮಾನ್ಸೂನ್ ಅಧಿವೇಶನವನ್ನು ನಡೆಸುವ ವಿಧಾನಗಳನ್ನು ಇನ್ನೂ ಚರ್ಚಿಸಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ. ಸಂಸದೀಯ ಸ್ಥಾಯಿ ಸಮಿತಿ ಸಭೆಗಳು ಸಹ ಜೂನ್ 3ನೇ ವಾರದಿಂದ ಪುನಾರಂಭಗೊಳ್ಳುವ ನಿರೀಕ್ಷೆಯಿದೆ ಎಂದು ಮೂಲಗಳು ತಿಳಿಸಿವೆ.