ಮಂಗಳೂರು:ಪ್ರಧಾನಿ ನರೇಂದ್ರ ಮೋದಿಯಂತೆ ರಾಹುಲ್ ಗಾಂಧಿ ಅವರು ಸುಳ್ಳು ಭರವಸೆಯನ್ನು ಕೊಡುವುದಿಲ್ಲ. ಮೋದಿ ಮಹಾ ಸುಳ್ಳುಗಾರ ಆಗಿದ್ದು ಎಲ್ಲಾ ಸುಳ್ಳು ಹೇಳಿದ್ದಾರೆ. ಶಿಕ್ಷಣ ವಿಚಾರದಲ್ಲಿ ಮದುವೆ ವಿಚಾರದಲ್ಲಿ ಸುಳ್ಳು ಹೇಳಿದ ಅವರು ಕಪಟ ನಾಟಕವನ್ನು ಆಡುತ್ತಾರೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಮಂಗಳೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಮೀಡಿಯಾ ಮ್ಯಾನೇಜ್ ಮಾಡಿದ್ದಾರೆ .ಪತ್ರಕರ್ತರಿಗೆ ಪ್ರಶ್ನೆಯನ್ನು ಕೇಳುವ ಅವಕಾಶ ಕೊಟ್ಟಿಲ್ಲ. ದೇಶದ ಇತಿಹಾಸದಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಪ್ರಧಾನಿ ಅವರು. ಮೋದಿ ರಾಜ್ ಮಾಫಿಯ ರಾಜ್ ಆಗಿದೆ .ಅವರು ದೊಡ್ಡ ದೊಡ್ಡ ಕಂಪನಿಗಳಿಗೆ ಚೌಕಿದಾರ ಆಗಿದ್ದಾರೆ ಎಂದು ಟೀಕಿಸಿದ್ದಾರೆ.
ಈ ಚುನಾವಣೆಯಲ್ಲಿ ಬಿಜೆಪಿ ಪರ ಬಹಳ ಭ್ರಮೆ ಸೃಷ್ಟಿಸಲಾಗಿದೆ. ಮಾಧ್ಯಮಗಳಲ್ಲಿ , ಸಾಮಾಜಿಕ ಮಾಧ್ಯಮಗಳಲ್ಲಿ ಈ ರೀತಿಯ ಭ್ರಮೆ ಸೃಷ್ಟಿ ಮಾಡಲಾಗಿದೆ. ಆದರೆ, ಗ್ರೌಂಡ್ ರಿಯಾಲಿಟಿ ಬೇರೆ ಇದೆ. ಈ ಬಾರಿ ಚುನಾವಣೆಯಲ್ಲಿ ಬಿಜೆಪಿ ಅತಿ ಕಡಿಮೆ ಸೀಟುಗಳನ್ನು ಗಳಿಸುತ್ತದೆ ಮತ್ತು ಕಾಂಗ್ರೆಸ್ ಪಕ್ಷ ಏಕೈಕ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.