ದಾಂತೇವಾಡ(ಛತ್ತೀಸಘಡ): ನಕ್ಸಲ ಪೀಡಿತ ಪ್ರದೇಶದಲ್ಲಿ ಬಿಜೆಪಿ ನಡೆಸುತ್ತಿದ್ದ ರ್ಯಾಲಿ ಮೇಲೆ ಮಾವೋವಾದಿಗಳು ಏಕಾಏಕಿ ದಾಳಿ ನಡೆಸಿದ್ದಾರೆ. ಪರಿಣಾಮ ಓರ್ವ ಬಿಜೆಪಿ ಎಂಎಲ್ಎ ಸೇರಿ ಐವರು ಭದ್ರತಾ ಸಿಬ್ಬಂದಿ ಸಾವನ್ನಪ್ಪಿರುವ ಘಟನೆ ನಡೆದಿದೆ.
ಏಪ್ರಿಲ್ 11ರಂದು ನಡೆಯಲಿರುವ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ದಾಂತೇವಾಡದಲ್ಲಿ ರ್ಯಾಲಿ ನಡೆಸುತ್ತಿತ್ತು. ಈ ವೇಳೆ ಬಿಜೆಪಿ ಶಾಸಕ ಭೀಮಾ ಮಾಂಡವಿ ಸೇರಿದಂತೆ ಅನೇಕರು ಭಾಗಿಯಾಗಿದ್ದರು. ಏಕಾಏಕಿ ನಕ್ಸಲರು ಐಇಡಿ ಬಾಂಬ್ ಸ್ಫೋಟಗೊಳಿಸಿ, ರ್ಯಾಲಿ ನಡೆಯುತ್ತಿದ್ದ ಸ್ಥಳದಲ್ಲಿ ಗುಂಡಿನ ದಾಳಿ ನಡೆಸಿದ್ದಾರೆ. ಈ ವೇಳೆ ಶಾಸಕ ಸೇರಿ ಐವರು ಭದ್ರತಾ ಸಿಬ್ಬಂದಿ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಶಾಸಕರು ಬಳಿಕೆ ಮಾಡುತ್ತಿದ್ದ ಕಾರು ಸಹ ಸಂಪೂರ್ಣವಾಗಿ ಜಖಂಗೊಂಡಿದೆ.