ರಾಯಚೂರು :ನಗರಾಭಿವೃದ್ಧಿ ಪ್ರಾಧಿಕಾರದ(ಆರ್‌ಡಿಎ) ನೂತನ ಅಧ್ಯಕ್ಷ ಹಾಗೂ ಸದಸ್ಯರು ಇಂದು ಅಧಿಕಾರ ಸ್ವೀಕರಿಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಗರ ಶಾಸಕ ಡಾ ಶಿವರಾಜ್ ಪಾಟೀಲ್ ಸಮ್ಮುಖದಲ್ಲಿ ಯಾಪಚೆಟ್ಟಿ ಗೋಪಾಲರೆಡ್ಡಿ ಅಧ್ಯಕ್ಷರಾಗಿ, ಶೇಖರವಾರದ್, ಎ ಚಂದ್ರಶೇಖರ್, ವಾಣಿಶ್ರೀ, ಮಂಚಾಲ ಭೀಮಣ್ಣ ಸದಸ್ಯರಾಗಿ ಅಧಿಕಾರ ಸ್ವೀಕರಿಸಿದರು.
ಹಲವು ದಿನಗಳಿಂದ ನೆನೆಗುದಿಗೆ ಬಿದ್ದಿದ್ದ ಆರ್‌ಡಿಎ ಅಧ್ಯಕ್ಷ ಸ್ಥಾನ ಮತ್ತು ಸದಸ್ಯ ಸ್ಥಾನಕ್ಕೆ ಬಿಜೆಪಿಯಲ್ಲಿ ಪೈಪೋಟಿ ನಡೆದಿತ್ತು. ಕಡೆಗೂ ಶಾಸಕ ಡಾ. ಶಿವರಾಜ್ ಪಾಟೀಲ್ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ಯಾಪಚೆಟ್ಟಿ ಗೋಪಾಲರೆಡ್ಡಿಯವರಿಗೆ ಅಧ್ಯಕ್ಷ ಸ್ಥಾನ ಲಭಿಸಿದೆ.
ಅಧ್ಯಕ್ಷ ಸ್ಥಾನ ಸ್ವೀಕರಿಸಿದ ಬಳಿಕ ಡ್ಯಾಡಿ ಕಾಲೋನಿಯಲ್ಲಿನ ಆರ್‌ಡಿಎ ಕಚೇರಿಗೆ ಭೇಟಿ ನೀಡಿದರು.