ಬ್ರಿಸ್ಟೋಲ್:ವಿಶ್ವಕಪ್ ಆರಂಭಕ್ಕೂ ಮುನ್ನ ನಡೆಯುತ್ತಿರುವ ಅಭ್ಯಾಸ ಪಂದ್ಯ ಕ್ರಿಕೆಟ್ ಪ್ರೇಮಿಗಳನ್ನು ಮಹಾಸಮರಕ್ಕೆ ತುದಿಗಾಲಲ್ಲಿ ನಿಲ್ಲುವಂತೆ ಮಾಡಿದೆ.
ಸದ್ಯ ಬ್ರಿಸ್ಟೋಲ್ನಲ್ಲಿ ನಡೆಯುತ್ತಿರುವ ವೆಸ್ಟ್ ಇಂಡೀಸ್ ಹಾಗೂ ನ್ಯೂಜಿಲ್ಯಾಂಡ್ ನಡುವಿನ ಅಭ್ಯಾಸ ಪಂದ್ಯದಲ್ಲಿ ಕೆರಿಬಿಯನ್ನರು ರನ್ಹೊಳೆಯನ್ನೇ ಹರಿಸಿದ್ದಾರೆ. ಪರಿಣಾಮ್ ಕಿವೀಸ್ನ ಪ್ರಮುಖ ಬೌಲರ್ ಮ್ಯಾಟ್ ಹೆನ್ರಿ ಬೌಲಿಂಗ್ನಲ್ಲಿ ನೂರು ರನ್ ನೀಡಿ ಕಳಪೆ ಪ್ರದರ್ಶನ ತೋರಿದ್ದಾರೆ.
ಟಾಸ್ ಸೋತು ಬ್ಯಾಟಿಂಗ್ ನಡೆಸಿದ ಹೋಲ್ಡರ್ ಪಡೆಗೆ ಆರಂಭಿಕರಾದ ಕ್ರಿಸ್ ಗೇಲ್ ಹಾಗೂ ಎವಿನ್ ಲೆವಿಸ್ ಉತ್ತಮ ಆರಂಭ ನೀಡಿದರು. ಗೇಲ್ 36 ರನ್ ಹಾಗೂ ಲೆವಿಸ್ 50 ರನ್ ಬಾರಿಸಿ ಪೆವಿಲಿಯನ್ ಸೇರಿದರು.