ಭೋಪಾಲ್: ಮಧ್ಯಪ್ರದೇಶದ ಭೋಪಾಲ್ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಸಾಧ್ವಿ ಪ್ರಗ್ಯಾ ಸಿಂಗ್ಗೆ ರಾಷ್ಟ್ರೀಯ ತನಿಖಾ ಸಂಸ್ಥೆಯ ವಿಶೇಷ ಕೋರ್ಟ್ ಬಿಗ್ ರಿಲೀಫ್ ನೀಡಿದೆ.
ಲೋಕ ಫೈಟ್: ಪ್ರಗ್ಯಾಗೆ ಗ್ರೀನ್ ಸಿಗ್ನಲ್ ಕೊಟ್ಟ ಎನ್ಐಎ... ಸತ್ಯಕ್ಕೆ ಸಂದ ಜಯ ಎಂದ ಸಾಧ್ವಿ! - ಲೋಕಸಭಾ ಕ್ಷೇತ್ರ
ವಿವಾದಿತ ಹೇಳಿಕೆ ನೀಡಿದ್ದರಿಂದ ಅವರ ಲೋಕಸಭಾ ಚುನಾವಣೆ ಸ್ಪರ್ಧೆ ತಡೆ ಹಿಡಿಯುವಂತೆ ಕೋರ್ಟ್ಗೆ ಅರ್ಜಿ ಸಲ್ಲಿಕೆ ಮಾಡಲಾಗಿತ್ತು.
ಬಾಬ್ರಿ ಮಸೀದಿ ಧ್ವಂಸ ಹಾಗೂ ಪೊಲೀಸ್ ಅಧಿಕಾರಿ ಹೇಮಂತ್ ಕರ್ಕರೆ ಕುರಿತು ಸಾಧ್ವಿ ವಿದಾದಿತ ಹೇಳಿಕೆ ನೀಡಿದ್ದರು. ಅದೇ ವಿಷಯವನ್ನಿಟ್ಟುಕೊಂಡು ಅವರ ಚುನಾವಣಾ ಸ್ಪರ್ಧೆ ತಡೆಯುವಂತೆ ಕೋರ್ಟ್ ಮೆಟ್ಟಲೇರಿದ್ದರು. ಇದರ ವಿಚಾರಣೆ ನಡೆಸಿರುವ ವಿಶೇಷ ನ್ಯಾಯಾಲಯ ಚುನಾವಣೆಯಲ್ಲಿ ಸ್ಪರ್ಧೆ ಮಾಡುವ ಅಭ್ಯರ್ಥಿಗಳನ್ನ ತಡೆ ಹಿಡಿಯುವ ಅಧಿಕಾರ ನಮಗಿಲ್ಲ. ಅದಕ್ಕೆ ಸಂಬಂಧಿಸಿದಂತೆ ಚುನಾವಣಾ ಆಯೋಗ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದೆ.
ತಮ್ಮ ವಿರುದ್ಧ ದಾಖಲಾಗಿದ್ದ ಅರ್ಜಿ ವಜಾಗೊಳ್ಳುತ್ತಿದ್ದಂತೆ ಮಾತನಾಡಿರುವ ಸಾಧ್ವಿ, ಇದು ಸತ್ಯಕ್ಕೆ ಸಿಕ್ಕಿರುವ ಜಯ ಎಂದು ಸಂತೋಷ ವ್ಯಕ್ತಪಡಿಸಿದ್ದಾರೆ. ಇನ್ನು 2008ರ ಮಾಲೇಗಾಂವ್ ಸ್ಫೋಟ ಪ್ರಕರಣದಲ್ಲಿ ಸಾಧ್ವಿ ಕ್ಲೀನ್ ಚಿಟ್ ಪಡೆದುಕೊಂಡಿದ್ದಾರೆ.