ಕರ್ನಾಟಕ

karnataka

ETV Bharat / briefs

ಮಹಾಫಲಿತಾಂಶಕ್ಕೆ ಒಂದೇ ದಿನ ಬಾಕಿ... ಷೇರು ಮಾರುಕಟ್ಟೆಯಲ್ಲಿ ಹರ್ಷೋಲ್ಲಾಸ - ಎಕ್ಸಿಟ್​ ಪೋಲ್​

ಬಹುತೇಕ ಎಲ್ಲ ಚುನಾವಣೋತ್ತರ ಸಮೀಕ್ಷೆಗಳು ಮೋದಿ ಪರವಾಗಿ ಭವಿಷ್ಯ ನುಡಿದಿದ್ದು ಷೇರು ಮಾರುಕಟ್ಟೆಯಲ್ಲಿನ ವಹಿವಾಟಿನ ಮೇಲೆ ಧನಾತ್ಮಕ ಪರಿಣಾಮ ಬೀರಿದೆ.

ಷೇರು ಮಾರುಕಟ್ಟೆ

By

Published : May 22, 2019, 10:37 AM IST

ಮುಂಬೈ:ಇಡೀ ಭಾರತ ದೇಶದ ಜನತೆ ಅತ್ಯಂತ ಕಾತರದಿಂದ ಕಾಯುತ್ತಿರುವ ಮಹಾಫಲಿತಾಂಶಕ್ಕೆ ಒಂದು ದಿನವಷ್ಟೇ ಬಾಕಿ ಇದ್ದು, ಮುಂಬೈ ಷೇರು ಮಾರುಕಟ್ಟೆ ಉತ್ತಮ ಆರಂಭ ಪಡೆದಿದೆ.

ಎಕ್ಸಿಟ್​ ಪೋಲ್​ ಬಳಿಕ ಉತ್ತಮ ವಹಿವಾಟು ನಡೆಸುತ್ತಿರುವ ಷೇರು ಮಾರುಕಟ್ಟೆ, ಹೂಡಿಕೆದಾರರ ಮೊಗದಲ್ಲಿ ಸಂತಸ ಮೂಡಿಸಿದೆ. ಬಹುತೇಕ ಎಲ್ಲ ಚುನಾವಣೋತ್ತರ ಸಮೀಕ್ಷೆಗಳು ಮೋದಿ ಪರವಾಗಿ ಭವಿಷ್ಯ ನುಡಿದಿದ್ದು ಷೇರು ಮಾರುಕಟ್ಟೆಯಲ್ಲಿನ ವಹಿವಾಟಿನ ಮೇಲೆ ಧನಾತ್ಮಕ ಪರಿಣಾಮ ಬೀರಿದೆ.

ಹೆಚ್ಚಿನ ಓದಿಗಾಗಿ:

ಸೋಲನ್ನು ಗೌರವಯುತವಾಗಿ ಸ್ವೀಕರಿಸಿ... ವಿಪಕ್ಷಗಳಿಗೆ ಕೇಂದ್ರ ಸಚಿವ ಸಲಹೆ

ಬುಧವಾರದ ಆರಂಭದ ವಹಿವಾಟಿನಲ್ಲಿ ಸೆನ್ಸೆಕ್ಸ್​ 76.46 ಹಾಗೂ ನಿಫ್ಟಿ 15.80 ಅಂಕಗಳನ್ನು ಹೆಚ್ಚಿಸಿಕೊಂಡಿದೆ. ಕಳೆದ ಕೆಲವು ದಿನಗಳಲ್ಲಿ ಏರಿಕೆಯನ್ನೇ ಕಾಣುತ್ತಿರುವ ಷೇರು ಮಾರುಕಟ್ಟೆ ಲೋಕಸಭಾ ಚುನಾವಣೆಯ ಫಲಿತಾಂಶಕ್ಕೆ ಯಾವ ರೀತಿ ಸ್ಪಂದಿಸಲಿದೆ ಎನ್ನುವುದು ಕುತೂಹಲ ಮೂಡಿಸಿದೆ.

ನಾಳಿನ ಮಹಾಫಲಿತಾಂಶದಲ್ಲಿ ಎನ್​ಡಿಎ ಮೈತ್ರಿಕೂಟ ಸರಳ ಬಹುಮತ ಗಳಿಸಿ ಅಧಿಕಾರ ಹಿಡಿದರೆ ಮಾರುಕಟ್ಟೆಯಲ್ಲಿ ಬಹುದೊಡ್ಡ ಬದಲಾವಣೆಯಾಗುವ ಸಾಧ್ಯತೆ ಕಡಿಮೆ ಎಂದು ಮಾರುಕಟ್ಟೆ ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ABOUT THE AUTHOR

...view details