ಕರ್ನಾಟಕ

karnataka

ETV Bharat / briefs

ನೀಟ್ ಪರೀಕ್ಷಾರ್ಥಿಗಳಿಗೆ ಇಲ್ಲಿದೆ ಗುಡ್ ನ್ಯೂಸ್...! - ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆ

ಸೋಮವಾರ ಬೆಳಗ್ಗೆ 6.30ಕ್ಕೆ ಬೆಂಗಳೂರು ತಲುಪಬೇಕಿದ್ದ ರೈಲು ಮಧ್ಯಾಹ್ನ 2.30ಕ್ಕೆ ತಲುಪಿತ್ತು. ರೈಲು ಸುಮಾರು 7 ಗಂಟೆಗಳಷ್ಟು ತಡವಾದ ಕಾರಣ ಸುಮಾರು 500ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ನೀಟ್ ಪರೀಕ್ಷೆ ಬರೆಯಲು ಸಾಧ್ಯವಾಗಲಿಲ್ಲ. ಅಂತವರಿಗೆ ಖುಷಿಯ ವಿಚಾರ ಇಲ್ಲಿದೆ.

ನೀಟ್

By

Published : May 6, 2019, 6:44 PM IST

ಬೆಂಗಳೂರು:ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕೋರ್ಸ್ ಗಳಿಗೆ ಪ್ರವೇಶ ಪಡೆಯಲು ನಡೆಯುವ ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆ (ನೀಟ್) ಬರೆಯಲು ಮತ್ತೊಮ್ಮೆ ಅವಕಾಶ ಕಲ್ಪಿಸಲಾಗಿದೆ.. ‌ಈ ಸಂಬಂಧ ಕೇಂದ್ರ ಸಚಿವ ಪ್ರಕಾಶ್ ಜಾವ್ಡೇಕರ್​ ಟ್ವೀಟ್ ಮಾಡಿ ಸ್ಪಷ್ಟಪಡಿಸಿದ್ದಾರೆ.

ಸೋಮವಾರ ಬೆಳಗ್ಗೆ 6.30ಕ್ಕೆ ಬೆಂಗಳೂರು ತಲುಪಬೇಕಿದ್ದ ರೈಲು ಮಧ್ಯಾಹ್ನ 2.30ಕ್ಕೆ ತಲುಪಿತ್ತು. ರೈಲು ಸುಮಾರು 7 ಗಂಟೆಗಳಷ್ಟು ತಡವಾದ ಕಾರಣ ಸುಮಾರು 500ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಸಾಧ್ಯವಾಗಲಿಲ್ಲ. ರೈಲ್ವೆ ಇಲಾಖೆಯ ಬೇಜವಾಬ್ದಾರಿತನವೇ ಎಲ್ಲದಕ್ಕೂ ಕಾರಣ ಎನ್ನುವ ಭಾರಿ ಆಕ್ರೋಶ ಕೇಳಿಬಂದಿತ್ತು. ಜೊತೆಗೆ ಮತ್ತೊಮ್ಮೆ ಪರೀಕ್ಷೆಗೆ ಅವಕಾಶ ಕಲ್ಪಿಸಬೇಕು ಎನ್ನುವ ಕೂಗು ಜೋರಾಗಿ ಕೇಳಿಬಂದಿತ್ತು.

ಸದ್ಯ ಮನವಿಗೆ ಕೇಂದ್ರ ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಮರು ಪರೀಕ್ಷೆ ನಡೆಸಲು ತೀರ್ಮಾನಿಸಿದ್ದಾರೆ. ಪರೀಕ್ಷೆ ಬರೆಯಲು ಸಾಧ್ಯವಾಗದೇ ನಿರಾಸೆಯಾಗಿದ್ದ ಅಭ್ಯರ್ಥಿಗಳಿಗೆ ಖುಷಿಯ ವಿಚಾರ ಎನ್ನಬಹುದು.

ABOUT THE AUTHOR

...view details