ಕೋಲ್ಕತ್ತಾ:ಪಶ್ಚಿಮ ಬಂಗಾಳದ ಕೋಲ್ಕತ್ತಾದಲ್ಲಿ ನಿನ್ನೆ ಅಮಿತ್ ಶಾ ರೋಡ್ ಶೋ ನಡೆಸುತ್ತಿದ್ದ ವೇಳೆ ನಡೆದ ಹಿಂಸಾಚಾರ ರಾಜಕೀಯ ಬಣ್ಣ ಪಡೆದುಕೊಡಿದ್ದು, ಇದೀಗ ಎಚ್ಚೆತ್ತುಕೊಂಡಿರುವ ಕೇಂದ್ರ ಚುನಾವಣಾ ಆಯೋಗ ಪ್ರಚಾರ ರದ್ಧುಗೊಳಿಸಿ ಆದೇಶ ಹೊರಡಿಸಿದೆ. ನಾಳೆಯಿಂದಲೇ ಈ ಆದೇಶ ಜಾರಿಬರಲಿದೆ.
ನಿನ್ನೆ ಅಮಿತ್ ಶಾ ರೋಡ್ ಶೋ ನಡೆಸುತ್ತಿದ್ದ ವೇಳೆ ಟಿಎಂಸಿ-ಬಿಜೆಪಿ ಕಾರ್ಯಕರ್ತರು ಪರಸ್ಪರ ಹೊಡೆದಾಡಿಕೊಂಡಿದ್ದರು. ಈ ವೇಳೆ ಈಶ್ವರಚಂದ್ರ ವಿದ್ಯಾಸಾಗರ್ ಪ್ರತಿಮೆ ಕೂಡ ಧ್ವಂಸಗೊಳಿಸಿದ್ದರು. ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಎರಡು ಪಕ್ಷಗಳು ಪರಸ್ಪರ ವಾಗ್ದಾಳಿ ನಡೆಸುತ್ತಿವೆ. ಇದೀಗ ಚುನಾವಣಾ ಆಯೋಗ ಕೊನೆಯ ಹಂತದಲ್ಲಿ ನಡೆಯುವ 9ಕ್ಷೇತ್ರಗಳ ಚುನಾವಣಾ ಪ್ರಚಾರ ಸಭೆ ರದ್ಧುಗೊಳಿಸಿ ಆದೇಶ ಹೊರಡಿಸಿದ್ದಾರೆ.