ಮಂಗಳೂರು: ನಗರದ ಜಿಲ್ಲಾ ಕಾರಾಗೃಹದೊಳಗೆ ಕೈದಿಗಳ ನಡುವೆ ನಡೆದ ಮಾರಾಮಾರಿಯ ಬಗ್ಗೆ ಪರಿಶೀಲನೆ ನಡೆಸಲು ಹೋದ ಸಂದರ್ಭದಲ್ಲಿ ತನ್ನ ಮೇಲೆ ಹಲ್ಲೆಯಾಗಿಲ್ಲ ಎಂದು ಮಂಗಳೂರು ಪೊಲೀಸ್ ಕಮಿಷನರ್ ಶಶಿಕುಮಾರ್ ಎನ್. ಸ್ಪಷ್ಟನೆ ನೀಡಿದರು.
ತಮ್ಮ ಕಚೇರಿಯಲ್ಲಿ ಸುದ್ದಿಗಾರರನ್ನು ಉದ್ದೇಶಿಸಿ ಮಾತಾಡಿದ ಅವರು, ಕೆಲ ಪತ್ರಿಕೆ ಹಾಗೂ ವೆಬ್ಸೈಟ್ನಲ್ಲಿ ಭಾನುವಾರ ಜೈಲಿನೊಳಗೆ ಕೈದಿಗಳ ನಡುವೆ ನಡೆದ ಮಾರಾಮಾರಿಯ ಬಗ್ಗೆ ಪರಿಶೀಲನೆಗೆ ತೆರಳಿದ ಸಂದರ್ಭದಲ್ಲಿ ಜೈಲು ಅಧಿಕಾರಿಗಳು, ಸಿವಿಲ್ ಪೊಲೀಸರು ಹಾಗೂ ಮಂಗಳೂರು ಪೊಲೀಸ್ ಆಯುಕ್ತರ ಮೇಲೂ ಹಲ್ಲೆಯಾಗಿದೆ ಎಂದು ತಪ್ಪಾಗಿ ಬರೆದಿದ್ದಾರೆ. ಆದರೆ ನನ್ನ ಮೇಲೆ ಯಾವುದೇ ರೀತಿಯ ಹಲ್ಲೆ ನಡೆದಿಲ್ಲ. ಈ ಬಗ್ಗೆ ಸಂಬಂಧಪಟ್ಟ ಸುದ್ದಿ ಮಾಧ್ಯಮದವರು ಸರಿಪಡಿಸಲಿ ಎಂದು ಹೇಳಿದರು.