ವಿಜಯಪುರ:ಜಿಲ್ಲೆಯಲ್ಲಿ ಇಂದು 11 ವರ್ಷದ ಬಾಲಕನಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 123ಕ್ಕೆ ಏರಿದೆ.
ರೋಗಿ - 3250, 11 ವರ್ಷದ ಬಾಲಕನಿಗೆ ಸೊಂಕು ತಗುಲಿದೆ. ಮಹಾರಾಷ್ಟ್ರದಿಂದ ಜಿಲ್ಲೆಗೆ ಆಗಮಿಸಿದ್ದ ಬಾಲಕ ಕುಟುಂಬದ ಜೊತೆ ಕ್ವಾರಂಟೈನ್ನಲ್ಲಿದ್ದ. ಸದ್ಯ ಬಾಲಕನ ಗಂಟಲು ದ್ರವ ಪರೀಕ್ಷೆ ವರದಿ ಬಂದಿದ್ದು, ಸೋಂಕು ತಗುಲಿರುವುದು ದೃಢವಾಗಿದೆ. ಜಿಲ್ಲಾಸ್ಪತ್ರೆಯಲ್ಲಿ ಬಾಲಕ ಚಿಕಿತ್ಸೆ ಪಡೆಯುತ್ತಿದ್ದಾನೆ.