ವಾಷಿಂಗ್ಟನ್: ಇಂಗ್ಲೆಂಡ್ ವಿರುದ್ಧ ಕೊನೆಯ ಏಕದಿನ ಪಂದ್ಯದಲ್ಲಿ ಸೋಲನಭವಿಸಿದ್ದ ಪಾಕಿಸ್ತಾನದ ತಂಡದ ಭಾಗವಾಗಿದ್ದ ಮಧ್ಯಮ ಕ್ರಮಾಂಕದ ಬ್ಯಾಟ್ಸಮನ್ ಆಸಿಫ್ ಅಲಿ ಪುತ್ರಿ ಕ್ಯಾನ್ಸರ್ಗೆ ಬಲಿಯಾಗಿದ್ದಾಳೆ.
4ನೇ ಸ್ಟೇಜ್ ಕ್ಯಾನ್ಸರ್ನಿಂದ ಬಳಲುತ್ತಿದ್ದ ಅಲಿಯ 2 ವರ್ಷದ ಪುತ್ರಿ ನೂರ್ ಫಾತಿಮಾ ಇಂದು ಯುನೈಟೆಡ್ ಸ್ಟೇಟ್ಸ್‌ನ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾಳೆ. ಇಂಗ್ಲೆಂಡ್ ಪ್ರವಾಸದಲ್ಲಿದ್ದ ಆಸಿಫ್, ಮಗಳು ಸಾವನ್ನಪ್ಪಿರುವ ಸುದ್ದಿ ತಿಳಿದು ಪ್ರವಾಸವನ್ನು ಮೊಟಕುಗೊಳಿಸಿ ತವರಿಗೆ ಮರಳಿದ್ದಾರೆ.