ಬಿಷ್ಕೆಕ್(ಕಿರ್ಗಿಸ್ತಾನ):ಎರಡು ದಿನಗಳ ಕಾಲ ಇಲ್ಲಿ ನಡೆಯುತ್ತಿರುವ ಶಾಂಘೈ ಸಹಕಾರ ಶೃಂಗಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗಿಯಾಗಿದ್ದು, ರಷ್ಯಾ ಅಧ್ಯಕ್ಷ ವಾಡ್ಲಿಮಿರ್ ಪುಟಿನ್ ಜತೆ ಮಹತ್ವದ ದ್ವಿಪಕ್ಷೀಯ ಮಾತುಕತೆಯಲ್ಲಿ ಭಾಗಿಯಾದರು.
ಇದೇ ವೇಳೆ ರಷ್ಯಾ ಅಧ್ಯಕ್ಷರಿಗೆ ಪ್ರಧಾನಿ ನರೇಂದ್ರ ಮೋದಿ ಧನ್ಯವಾದ ಹೇಳಿದ್ದು, ಉತ್ತರಪ್ರದೇಶದ ಅಮೇಠಿಯ ಕೊರ್ವಾ ಪ್ರದೇಶದಲ್ಲಿ ರೈಫಲ್ ತಯಾರಿಕಾ ಘಟಕ ಆರಂಭಿಸಲು ಸಹಾಯ ಮಾಡಿದ್ದಕ್ಕಾಗಿ ಕೃತಜ್ಞತೆಗಳು ಎಂದಿದ್ದಾರೆ. ಭಾರತ ಮತ್ತು ರಷ್ಯಾ ಜಂಟಿ ಸಹಭಾಗಿತ್ವದಲ್ಲಿ ಎಕೆ-203 ರೈಫೆಲ್ ತಯಾರು ಮಾಡಲು ಈಗಾಗಲೇ ನಿರ್ಧರಿಸಲಾಗಿದ್ದು, ಜಗತ್ತಿನ ಅತ್ಯಂತ ಸುಧಾರಿತ ರೈಫೆಲ್ ಇದಾಗಿದೆ.