ನವದೆಹಲಿ:ಎರಡನೇ ಅವಧಿಗೆ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿರುವ ನರೇಂದ್ರ ಮೋದಿ ಜೂನ್ 9ರಂದು ತಿರುಪತಿಗೆ ಭೇಟಿ ನೀಡಲಿದ್ದಾರೆ.
ಪ್ರಧಾನಿ ಮೋದಿ ಜೂನ್ 9ರಂದು ತಿರುಪತಿ ತಿಮ್ಮಪ್ಪನ ದರ್ಶನ ಪಡೆಯಲಿದ್ದಾರೆ ಎಂದು ಆಂಧ್ರ ಪ್ರದೇಶ ಬಿಜೆಪಿ ಅಧ್ಯಕ್ಷ ಕನ್ನ ಲಕ್ಷ್ಮಿ ನಾರಾಯಣ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.