ನವದೆಹಲಿ:ನರೇಂದ್ರ ಮೋದಿ ಎರಡನೇ ಬಾರಿಗೆ ಪ್ರಧಾನಿಯಾಗಿ ಮೇ 30ರಂದು ಅಧಿಕಾರ ಸ್ವೀಕರಿಸಲಿದ್ದು, ಈಗಾಗಲೇ ಮೋದಿ ಫಾರಿನ್ ಟೂರ್ ಬಗ್ಗೆ ಮಾಹಿತಿಯೊಂದು ಹೊರಬಿದ್ದಿದೆ.
ಕಳೆದ ಐದು ವರ್ಷದ ಆಡಳಿತದಲ್ಲಿ ಸಾಕಷ್ಟು ವಿದೇಶ ಪ್ರವಾಸ ಮಾಡಿರುವ ಮೋದಿ ಇದೇ ವಿಚಾರಕ್ಕೆ ಪ್ರತಿಪಕ್ಷಗಳ ಕೆಂಗಣ್ಣಿಗೂ ಗುರಿಯಾಗಿದ್ದರು. ವಿಪಕ್ಷಗಳು ಇದನ್ನೇ ಹಲವಾರು ಬಾರಿ ಟೀಕಾಸ್ತ್ರವಾಗಿ ಬಳಸಿಕೊಂಡಿದ್ದರು.
ನರೇಂದ್ರ ಮೋದಿ ಎರಡನೇ ಅವಧಿಗೆ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಮಾಲ್ಡೀವ್ಸ್ಗೆ ಆಗಮಿಸಲಿದ್ದಾರೆ ಎಂದು ಮಾಲ್ಡೀವ್ಸ್ ಮಾಧ್ಯಮಗಳು ವರದಿ ಮಾಡಿವೆ.
ಜೂನ್ 7 ಹಾಗೂ 8ರಂದು ನರೇಂದ್ರ ಮೋದಿ ಮಾಲ್ಡೀವ್ಸ್ ಪ್ರವಾಸ ಕೈಗೊಳ್ಳಲಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿದ್ದು ಮಾಲ್ಡೀವ್ಸ್ ಅಧ್ಯಕ್ಷ ಕಚೇರಿಯ ವಕ್ತಾರ ಇಬ್ರಾಹಿಂ ಹೂಡ್ ಈ ವಿಚಾರಕ್ಕೆ ಯಾವುದೇ ಸ್ಪಷ್ಟನೆ ನೀಡಿಲ್ಲ.
2014ರಲ್ಲಿ ಅಧಿಕಾರ ಸ್ವೀಕರಿಸಿದ ಬಳಿಕ ಮೋದಿ ತಮ್ಮ ಮೊದಲ ಭೇಟಿಗೆ ಭೂತಾನ್ ದೇಶವನ್ನು ಆರಿಸಿಕೊಂಡಿದ್ದರು.