ನವದೆಹಲಿ: ಕರ್ನಾಟಕ ರಾಜ್ಯೋತ್ಸವ ನಿಮಿತ್ತ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಮತ್ತು ಪ್ರಧಾನಿ ನರೇಂದ್ರ ಮೋದಿ ಟ್ವಿಟರ್ ಮೂಲಕ ರಾಜ್ಯದ ಜನರಿಗೆ ಶುಭಾಶಯ ಕೋರಿದ್ದಾರೆ.
ಕನ್ನಡಿಗರ ವಿಶಾಲ ಹೃದಯವಂತಿಕೆ ಹೊಗಳಿದ ಪ್ರಧಾನಿ: ರಾಜ್ಯೋತ್ಸವ ಶುಭಾಶಯ ಹೇಳಿದ ರಾಷ್ಟ್ರಪತಿ - ಟ್ವಿಟರ್ ಮೂಲಕ ರಾಜ್ಯದ ಜನತೆಗೆ ಶುಭಾಶಯ
ಕರ್ನಾಟಕ ರಾಜ್ಯೋತ್ಸವದ ಮಹತ್ವ ಮತ್ತು ಕನ್ನಡಿಗರ ಕುರಿತು ಪ್ರಧಾನಿ ನರೇಂದ್ರ ಮೋದಿ ಹೊಗಳಿಕೆ ಮಾತುಗಳನ್ನಾಡಿದ್ದಾರೆ. ಕನ್ನಡದಲ್ಲೇ ಟ್ವೀಟ್ ಮಾಡಿದ ರಾಷ್ಟ್ರಪತಿ ಕೋವಿಂದ್ ಹಾಗೂ ಪ್ರಧಾನಿ ಮೋದಿ.
ಶುಭಾಶಯ
ಶುಭಾಶಯದ ಜೊತೆಗೆ ಕನ್ನಡಿಗರ ಹೃದಯವಂತಿಕೆ ಹಾಗೂ ಸಂಸ್ಕೃತಿಯನ್ನು ಪ್ರಧಾನಿ ಶ್ಲಾಘಿಸಿದ್ದಾರೆ. ರಾಷ್ಟ್ರದ ಬೆಳವಣಿಗೆಗೆ ಕರ್ನಾಟಕ ನೀಡಿದ ಅತ್ಯುನ್ನತ ಕೊಡುಗೆಯನ್ನು ಆಚರಣೆ ಮಾಡುವ ದಿವಸವೇ ಕರ್ನಾಟಕ ರಾಜ್ಯೋತ್ಸವ. ಕನ್ನಡಿಗರ ವಿಶಾಲ ಹೃದಯವಂತಿಕೆ ಹಾಗೂ ಕನ್ನಡ ನಾಡಿನ ಸೌಂದರ್ಯ ಹೆಸರುವಾಸಿಯಾದದ್ದು. ಬರುವ ದಿನಗಳಲ್ಲಿ ಕರ್ನಾಟಕದ ಅಭಿವೃದ್ಧಿಗಾಗಿ ಪ್ರಾರ್ಥಿಸುತ್ತೇನೆ ಎಂದು ಮೋದಿ ಟ್ವೀಟ್ ಮಾಡಿದ್ದಾರೆ.
ಮುಂಬರುವ ದಿನಗಳಲ್ಲಿ ಕರ್ನಾಟಕ ಇನ್ನಷ್ಟು ಎತ್ತರಕ್ಕೆ ಬೆಳೆಯಲಿ ಎಂದು ರಾಷ್ಟ್ರಪತಿ ಕೋವಿಂದ್ ಅವರು ರಾಜ್ಯದ ಜನರಿಗೆ ಶುಭಾಶಯ ಕೋರಿ ಟ್ವೀಟ್ ಮಾಡಿದ್ದಾರೆ.
Last Updated : Nov 1, 2019, 9:25 AM IST