ಕರ್ನಾಟಕ

karnataka

ETV Bharat / briefs

ಕೊರೊನಾ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ : ಯುವಕ ಅಂದರ್ - Police arrested youth

ಸಾಮಾಜಿಕ ಜಾಲತಾಣದಲ್ಲಿ ಕೊರೊನಾ ಕುರಿತಂತೆ ಸುಳ್ಳು ಸುದ್ದಿ ಹರಡುತ್ತಿದ್ದ ಯುವಕನನ್ನು ನಂಜನಗೂಡು ಟೌನ್ ಪೊಲೀಸರು ಬಂಧಿಸಿ ತನಿಖೆ ಕೂಗೊಂಡಿದ್ದಾರೆ.

Mysore
Mysore

By

Published : Jun 15, 2020, 7:13 PM IST

ಮೈಸೂರು:ಸಾಮಾಜಿಕ ಜಾಲತಾಣದಲ್ಲಿ ಕೊರೊನಾ ವಿಚಾರವಾಗಿ ಸುಳ್ಳು ಸುದ್ದಿ ಹರಡುತ್ತಿದ್ದ ಯುವಕನನ್ನು ನಂಜನಗೂಡು ಟೌನ್ ಪೊಲೀಸರು ಬಂಧಿಸಿದ್ದಾರೆ.

ಪ್ರಜ್ವಲ್ ಕಶ್ಯಪ್ ಬಂಧಿತ ಯುವಕ. ಈತ ನಂಜನಗೂಡ್ ಎಂಬ ಫೇಸ್ ಬುಕ್ ಅಕೌಂಟ್ ವೊಂದರಲ್ಲಿ ಮಹಾರಾಷ್ಟ್ರದಿಂದ ಬಂದಿದ್ದ ಹತ್ತೊಂಬತ್ತು ಜನರ ಪೈಕಿ ಐದು ಜನರಿಗೆ ಕೊರೊನಾ ಪಾಸಿಟಿವ್ ಬಂದಿದೆ.

ಇವರೆಲ್ಲಾ ನಂಜನಗೂಡಿನ ಬಡಾವಣೆಯಲ್ಲಿ ವಾಸವಾಗಿದ್ದಾರೆ. ಇವರಿಗೆ ಫ್ಯಾಕ್ಟರಿ ಕೆಲಸಕ್ಕೆ ಹೋಗುವುದನ್ನು ನಿರಾಕರಿಸಲಾಗಿದೆ ಎಂದು ಸುಳ್ಳು ಸುದ್ದಿಯನ್ನು ಹರಿಬಿಟ್ಟದ್ದ ಎನ್ನಲಾಗುತ್ತಿದೆ.

ಈ ಸಂಬಂಧ ಯುವಕನ ವಿರುದ್ಧ ದೂರು ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಬಂಧಿಸಿ, ತನಿಖೆ ಕೈಗೊಂಡಿದ್ದಾರೆ.

ABOUT THE AUTHOR

...view details