ಬಳ್ಳಾರಿ:ಜಿಲ್ಲೆಯ ಸಂಡೂರು ಹಾಗೂ ಹೂವಿನ ಹಡಗಲಿ ಪುರಸಭೆ ಮತ್ತು ಕಮಲಾಪುರ ಪಟ್ಟಣ ಪಂಚಾಯಿತಿಗೆ ನಾಳೆ (ಮೇ29) ಮತದಾನ ನಡೆಯಲಿದ್ದು, ಎಲ್ಲ ಮತಗಟ್ಟೆ ಕೇಂದ್ರಗಳಿಗೆ ಬಿಗಿ ಬಂದೋಬಸ್ತ್ ಮಾಡಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ಬ. ನಿಂಬರಗಿ ತಿಳಿಸಿದ್ದಾರೆ.
ಬಳ್ಳಾರಿ ಜಿಲ್ಲೆಯ 3 ಪುರಸಭೆ, ಪಟ್ಟಣ ಪಂಚಾಯಿತಿಗೆ ನಾಳೆ ಮತದಾನ: ಬಿಗಿ ಬಂದೋಬಸ್ತ್ - undefined
ಬಳ್ಳಾರಿ ಜಿಲ್ಲೆಯ ಸಂಡೂರು ಹಾಗೂ ಹೂವಿನ ಹಡಗಲಿ ಪುರಸಭೆ ಮತ್ತು ಕಮಲಾಪುರ ಪಟ್ಟಣ ಪಂಚಾಯಿತಿಗೆ ನಾಳೆ ಮತದಾನ ನಡೆಯಲಿದೆ.
ಬಳ್ಳಾರಿಯಲ್ಲಿಂದು ಮಾತನಾಡಿದ ಅವರು, ಜಿಲ್ಲೆಯ ಹರಪನಹಳ್ಳಿ ಪುರಸಭೆ ಸದ್ಯ ದಾವಣಗೆರೆ ಜಿಲ್ಲಾ ಪೊಲೀಸ್ ಇಲಾಖೆ ಅಡಿ ಇರುವುದರಿಂದ ಈ ಬಾರಿ ನಡೆಯುವ ಪುರಸಭೆ ಚುನಾವಣೆಗೆ ಜಿಲ್ಲೆಯ ಪೊಲೀಸ್ ಸಿಬ್ಬಂದಿ ನಿಯೋಜನೆ ಮಾಡಿಲ್ಲ. ಕಮಲಾಪುರ ಪಟ್ಟಣ ಪಂಚಾಯಿತಿ, ಸಂಡೂರು - ಹೂವಿನ ಹಡಗಲಿ ಪುರಸಭೆ ಎಲ್ಲ ಮತಗಟ್ಟೆ ಕೇಂದ್ರಗಳಿಗೆ ಅಗತ್ಯ ಪೊಲೀಸ್ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ ಎಂದರು.
ಜಿಲ್ಲೆಯ ಸಂಡೂರು ಪುರಸಭೆ 34, ಹೂವಿನ ಹಡಗಲಿ ಪುರಸಭೆ 26, ಹರಪನಹಳ್ಳಿ 42 ಹಾಗೂ ಕಮಲಾಪುರ ಪಟ್ಟಣ 20 ಸೇರಿದಂತೆ 122 ಮತಗಟ್ಟೆ ಕೇಂದ್ರಗಳಿವೆ. ಹರಪನಹಳ್ಳಿ ಹೊರತು ಪಡಿಸಿ ಉಳಿದ ಮೂರು ಕಡೆಗಳಲ್ಲಿ ಸೂಕ್ತ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.
ನಿರ್ಭೀತಿಯಿಂದ ಮತ ಚಲಾಯಿಸಿ: ಆಯಾ ಪುರಸಭೆ ಹಾಗೂ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಮತದಾರರು ನಿರ್ಭೀತಿಯಿಂದ ಮತಗಟ್ಟೆಗೆ ಬಂದು ಮತ ಚಲಾಯಿಸಿ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ಬ. ನಿಂಬರಗಿ ಕರೆ ನೀಡಿದ್ದಾರೆ.