ಚಿಕ್ಕೋಡಿ: ಚಿಕ್ಕೋಡಿ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಸೋಲುನುಭವಿಸಿರುವ ಪ್ರಕಾಶ್ ಹುಕ್ಕೇರಿ ಅವರು ಇದೀಗ ಪಕ್ಷದ ಕಾರ್ಯಕರ್ತರು ಮತ್ತು ಮುಖಂಡರ ಭೇಟಿಗೆ ನಿರಾಕರಿಸುತ್ತಿದ್ದಾರೆ. ಸೋಲಿನ ಆಘಾತದಿಂದ ಮಾಜಿ ಸಂಸದ ಪ್ರಕಾಶ್ ಹುಕ್ಕೇರಿ ಬೆಳಗಾವಿಯ ತಮ್ಮ ನಿವಾಸದಲ್ಲಿ ತಂಗಿದ್ದಾರೆ ಎಂದು ತಿಳಿದುಬಂದಿದೆ.
ಪ್ರಕಾಶ್ ಹುಕ್ಕೇರಿಗೆ ಶಾಕ್ ನೀಡಿದ್ರಾ ಕೈ ರೆಬಲ್ ಶಾಸಕ ರಮೇಶ್ ಜಾರಕಿಹೊಳಿ? - Chikkodi_sanjay
ಚಿಕ್ಕೋಡಿ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಹಿಡಿತದಲ್ಲಿರುವ ಅಥಣಿ, ಯಮಕನಮರಡಿ, ಕಾಗವಾಡ ತಾಲೂಕುಗಳಲ್ಲಿಯೇ ಪ್ರಕಾಶ್ ಹುಕ್ಕೇರಿಗೆ ತೀವ್ರ ಮುಖಭಂಗವಾಗಿದೆ. ಅವರ ವಿರುದ್ಧ ಸ್ವಪಕ್ಷದ ರೆಬಲ್ ಶಾಸಕ ರಮೇಶ್ ಜಾರಕಿಹೊಳಿ ಕೆಲಸ ಮಾಡಿದ್ದರು ಎಂಬ ಆರೋಪ ಕೇಳಿಬಂದಿದೆ. ಸೋಲಿನ ಆಘಾತದಿಂದ ಹುಕ್ಕೇರಿ ಅವರು ಕಾರ್ಯಕರ್ತರು ಮತ್ತು ಮುಖಂಡರ ಭೇಟಿಗೆ ನಿರಾಕರಿಸುತ್ತಿದ್ದಾರೆ ಎನ್ನಲಾಗ್ತಿದೆ.
ಕಾಂಗ್ರೆಸ್ ಹಿಡಿತವಿದ್ದ ಅಥಣಿ, ಯಮಕನಮರಡಿ, ಕಾಗವಾಡ ತಾಲೂಕುಗಳಲ್ಲಿಯೇ ಪ್ರಕಾಶ್ ಹುಕ್ಕೇರಿಗೆ ತೀವ್ರ ಹಿನ್ನಡೆಯಾದ ಹಿನ್ನಲೆಯಲ್ಲಿ ಅವರು ಕಂಗಾಲಾಗಿದ್ದಾರೆ ಎಂದು ಹೇಳಲಾಗುತ್ತಿದೆ.
ಬಿಜೆಪಿ ಅಭ್ಯರ್ಥಿ ಅಣ್ಣಾಸಾಹೇಬ ಜೊಲ್ಲೆ ಅವರು ಪ್ರಕಾಶ್ ಹುಕ್ಕೇರಿ ವಿರುದ್ಧ 1,18,877 ಮತಗಳಿಂದ ಜಯ ಸಾಧಿಸಿದ್ದಾರೆ. ಹೀಗಾಗಿ ಮಾಜಿ ಸಂಸದ ಹುಕ್ಕೇರಿಗೆ ಭಾರಿ ಮುಖಭಂಗವಾಗಿದೆ.
ಕಾಂಗ್ರೆಸ್ ಹಿಡಿತವಿರುವ ವಿಧಾನಸಭಾ ಕ್ಷೇತ್ರಗಳಲ್ಲಿ ಮಾಜಿ ಸಚಿವ, ಕಾಂಗ್ರೆಸ್ ರೆಬಲ್ ಶಾಸಕ ರಮೇಶ್ ಜಾರಕಿಹೊಳಿ ಬಿಜೆಪಿ ಪರ ಪ್ರಚಾರ ಮಾಡಿದ್ದರು. ಹಾಗಾಗಿ ಈ ಬಾರಿ ಪ್ರಕಾಶ್ ಹುಕ್ಕೇರಿ ಸೋಲನುಭವಿಸಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ.
TAGGED:
Chikkodi_sanjay