ಕರ್ನಾಟಕ

karnataka

ETV Bharat / briefs

ಭಯೋತ್ಪಾದನೆ, ಹಿಂಸೆಯನ್ನು ನಮ್ಮೆಲ್ಲಾ ಸಾಮರ್ಥ್ಯದಿಂದ ಎದುರಿಸುತ್ತೇವೆ: ಸಿಬ್ಬಂದಿಗಳಿಗೆ ಪ್ರತಿಜ್ಞಾ ವಿಧಿ ಬೋಧಿಸಿದ ಡಿಸಿ

ಶಿವಮೊಗ್ಗ ಜಿಲ್ಲಾಧಿಕಾರಿಯಿಂದ ಸಿಬ್ಬಂದಿಗಳಿಗೆ ಭಯೋತ್ಪಾದನಾ ವಿರೋಧಿ ದಿನದ ಪ್ರಮಾಣ ವಚನ ಬೋಧನೆ

ಭಯೋತ್ಪಾದನಾ ವಿರೋಧಿ ದಿನ

By

Published : May 22, 2019, 5:56 AM IST

ಶಿವಮೊಗ್ಗ: ಸರ್ಕಾರದ ಆದೇಶದಂತೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಿಬ್ಬಂದಿಗಳಿಗೆ ಪ್ರತಿಜ್ಞಾವಿಧಿ ಬೋಧಿಸಲಾಯಿತು.

ಭಯೋತ್ಪಾದನಾ ವಿರೋಧಿ ದಿನದ ಪ್ರಮಾಣವಚನ ಬೋಧಿಸಿದ ಜಿಲ್ಲಾಧಿಕಾರಿ ಕೆ.ಎ.ದಯಾನಂದ, ಅಹಿಂಸೆ ಹಾಗೂ ಸಹನೆಗೆ ಹೆಸರಾದ ನಮ್ಮ ರಾಷ್ಟ್ರದ ಭವ್ಯ ಪರಂಪರೆಯಲ್ಲಿ ದೃಢ ವಿಶ್ವಾಸವುಳ್ಳವರು.ಭಾರತದ ಪ್ರಜೆಗಳಾದ ನಾವೆಲ್ಲಾ ಭಯೋತ್ಪಾದನೆ ಮತ್ತು ಹಿಂಸೆಯನ್ನು ನಮ್ಮೆಲ್ಲ ಸಾಮರ್ಥ್ಯದಿಂದ ಎದುರಿಸುತ್ತೇವೆ ಎಂದು ಈ ಮೂಲಕ ಶ್ರದ್ಧಾ ಪೂರ್ವಕವಾಗಿ ಪ್ರತಿಜ್ಞೆ ಮಾಡುತ್ತೇವೆ.

ಔಯೋತ್ಪಾದನಾ ವಿರೋಧ ದಿನದ ಪ್ರತಿಜ್ಞಾ ವಿಧಿಯನ್ನು ಬೋಧಿಸುತ್ತಿರುವ ಜಿಲ್ಲಾಧಿಕಾರಿ ಕೆ.ಎ.ದಯಾನಂದ

ನಮ್ಮ ಸಹ ಬಾಂಧವರಲ್ಲಿ ಶಾಂತಿ ಸಾಮಾಜಿಕ ಸೌಹಾರ್ದತೆ ಮತ್ತು ಪರಸ್ಪರ ಅರಿವನ್ನು ಸಾಧಿಸಲು ಹಾಗೂ ಉತ್ತೇಜಿಸಲು, ಮಾನವ ಜೀವಕ್ಕೆ ಹಾಗೂ ಮೌಲ್ಯಗಳಿಗೆ ಬೆದರಿಕೆ ಒಡ್ಡುತ್ತಿರುವ ಶಕ್ತಿಗಳ ವಿರುದ್ಧ ಹೋರಾಡಲು ನಾವು ಪಣ ತೊಡುತ್ತೇವೆ ಎಂದು ಜಿಲ್ಲಾಧಿಕಾರಿಗಳು ಕಚೇರಿಯ ಸಿಬ್ಬಂದಿಗಳಿಗೆ ಪ್ರಮಾಣ ವಚನ ಬೋಧಿಸಿದರು.

ABOUT THE AUTHOR

...view details