ವಾರಣಾಸಿ: ಪ್ರಧಾನಿ ನರೇಂದ್ರ ಮೋದಿ ಸಂಸದೀಯ ಕ್ಷೇತ್ರ ವಾರಣಾಸಿಯಲ್ಲಿ ಕಾಂಗ್ರೆಸ್ ರಣಕಹಳೆ ಊದಿದ್ದು, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಅಬ್ಬರದ ಮತಪ್ರಚಾರ ನಡೆಸಿದರು.
ಮೋದಿ ಕ್ಷೇತ್ರದಲ್ಲಿ ಪ್ರಿಯಾಂಕಾ ಮತಬೇಟೆ...ಪಿಎಂ ವಿರುದ್ಧ ವಾಗ್ದಾಳಿ
ಉತ್ತರ ಪ್ರದೇಶದಲ್ಲಿ ಅತಿ ಹೆಚ್ಚು ಸ್ಥಾನ ಗೆಲ್ಲುವ ಉದ್ದೇಶ ಹೊಂದಿರುವ ಕಾಂಗ್ರೆಸ್, ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕೂಡ ರಣತಂತ್ರ ರೂಪಿಸಿದೆ. ಅದರ ಫಲವಾಗಿ ಇಂದು ಪ್ರಿಯಾಂಕಾ ಗಾಂಧಿ ವಾರಣಾಸಿಯಲ್ಲಿ ಅಬ್ಬರದ ಪ್ರಚಾರ ನಡೆಸಿದರು.
ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕಣಕ್ಕಿಳಿದಿರುವ ಕಾಂಗ್ರೆಸ್ನ ಅಜಯ್ ರಾಯ್ ಪರ ಮತಬೇಟೆ ನಡೆಸಿದ ಪ್ರಿಯಾಂಕಾ, ಪ್ರಚಾರ ಆರಂಭಕ್ಕೂ ಮೊದಲು ಬನಾರಸ್ ವಿಶ್ವವಿದ್ಯಾಲಯದ ಬಳಿ ಇರುವ ಪಂಡಿತ್ ಮದನ್ ಮೊಹನ್ ಮಾಳ್ವಿಯಾ ಪುತ್ಥಳಿಗೆ ನಮಸ್ಕರಿಸಿದರು.
ಚುನಾವಣಾ ರಾಲಿಯಲ್ಲಿ ಪ್ರಧಾನಿ ವಿರುದ್ಧ ಹರಿಹಾಯ್ದ ಪ್ರಿಯಾಂಕಾ,ವಾರಣಾಸಿಯಲ್ಲಿ ಪ್ರಧಾನಿ ಮೋದಿ ಕಾನೂನು ಸುವ್ಯವಸ್ಥೆ ಹಾಳು ಮಾಡಿದ್ದು, ಅವರಿಗೆ ಮತದಾರರು ತಕ್ಕಪಾಠ ಕಲಿಸಬೇಕಾಗಿದೆ ಎಂದು ತಿಳಿಸಿದರು.ವಾರಣಾಸಿಯಲ್ಲಿ ಮೇ 19ರಂದು(ಭಾನುವಾರ) ಮತದಾನ ನಡೆಯಲಿದ್ದು, ಇದೇ ಕ್ಷೇತ್ರದಲ್ಲಿ ಎಸ್ಪಿ-ಬಿಎಸ್ಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಮಾಜಿ ಯೋಧ ತೇಜ್ ಬಹೂದ್ದೂರ್ ನಾಮಪತ್ರ ತಿರಸ್ಕೃತಗೊಂಡಿದೆ.