ಕರ್ನಾಟಕ

karnataka

ETV Bharat / briefs

ಧೃತಿಗೆಡದಿರಿ, ನಮ್ಮ ಶ್ರಮ ವ್ಯರ್ಥವಾಗಲ್ಲ... ಕಾರ್ಯಕರ್ತರಿಗೆ ಧೈರ್ಯ ತುಂಬಿದ ಪ್ರಿಯಾಂಕಾ ಗಾಂಧಿ - ಎಕ್ಸಿಟ್ ಪೋಲ್

ಎನ್​ಡಿಎ ಮೈತ್ರಿಕೂಟಕ್ಕೆ ಪೂರ್ಣ ಬಹಮತ ಬರಲಿದೆ ಎಂದು ಚುನಾವಣೋತ್ತರ ಸಮೀಕ್ಷೆಗಳು ಹೇಳುತ್ತಿದ್ದು, ಇದು ಕಾಂಗ್ರೆಸ್​​ ಪಕ್ಷದ ನೈತಿಕತೆಯನ್ನು ಒಡೆಯುವ ಪ್ರಯತ್ನ ಎಂದು ಪ್ರಿಯಾಂಕ ಗಾಂಧಿ ವಾದ್ರಾ ಹೇಳಿದ್ದಾರೆ.

ಪ್ರಿಯಾಂಕ ಗಾಂಧಿ

By

Published : May 21, 2019, 10:44 AM IST

ನವದೆಹಲಿ: ಚುನಾವಣೋತ್ತರ ಸಮೀಕ್ಷೆಗಳಲ್ಲಿ ಕಾಂಗ್ರೆಸ್​ ಸಂಪೂರ್ಣವಾಗಿ ನೆಲಕಚ್ಚಿದೆ ಎಂದು ಭವಿಷ್ಯ ನುಡಿಯಲಾಗಿದ್ದು ಈ ಕುರಿತಂತೆ ಪಕ್ಷದ ಕಾರ್ಯಕರ್ತರಿಗೆ ಪೂರ್ವ ಉತ್ತರ ಪ್ರದೇಶದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಧೈರ್ಯ ತುಂಬುವ ಕೆಲಸ ಮಾಡಿದ್ದಾರೆ.

ಎಕ್ಸಿಟ್ ಪೋಲ್​​ಗಳನ್ನು ಪಕ್ಷದ ಕಾರ್ಯಕರ್ತರು ಗಂಭೀರವಾಗಿ ಪರಿಗಣಿಸುವ ಅಗತ್ಯವಿಲ್ಲ. ಜೊತೆಗೆ ಗಾಳಿ ಸುದ್ದಿಗಳನ್ನು ನಂಬಬೇಡಿ ಎಂದು ಪ್ರಿಯಾಂಕಾ ಗಾಂಧಿ ಮನವಿ ಮಾಡಿದ್ದಾರೆ.

ಹೆಚ್ಚಿನ ಓದಿಗಾಗಿ:

ಒಗ್ಗೂಡಿದ ವಿಪಕ್ಷಗಳು, ಔತಣಕೂಟದಲ್ಲಿ ಎನ್​ಡಿಎ ನಾಯಕರು ಭಾಗಿ​​​.. ನವದೆಹಲಿಯಲ್ಲಿ ಗರಿಗೆದರಿದ ರಾಜಕಾರಣ

ಎನ್​ಡಿಎ ಮೈತ್ರಿಕೂಟಕ್ಕೆ ಪೂರ್ಣ ಬಹಮತ ಬರಲಿದೆ ಎಂದು ಚುನಾವಣೋತ್ತರ ಸಮೀಕ್ಷೆಗಳು ಹೇಳುತ್ತಿದ್ದು, ಇದು ಕಾಂಗ್ರೆಸ್​​ನ ನೈತಿಕತೆಯನ್ನು ಒಡೆಯುವ ಪ್ರಯತ್ನ ಎಂದು ಅವರು ಹೇಳಿದ್ದಾರೆ.

ಮೇ 23ರಂದು ನಡೆಯಲಿರುವ ಫಲಿತಾಂಶದ ವೇಳೆ ಪಕ್ಷದ ಎಲ್ಲ ಕಾರ್ಯಕರ್ತರು ಎಣಿಕೆಯ ಕೇಂದ್ರದಲ್ಲಿ ಎಚ್ಚರಿಕೆಯಿಂದ ಇರಬೇಕು. ನಮ್ಮ ಶ್ರಮ ಖಂಡಿತಾ ವ್ಯರ್ಥವಾಗುವುದಿಲ್ಲ ಎಂದು ಇದೇ ವೇಳೆ ಪ್ರಿಯಾಂಕಾ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ABOUT THE AUTHOR

...view details