ಕೊಪ್ಪಳ:ಕೊರೊನಾ ಕೇರ್ ಸೆಂಟರ್ವೊಂದರಲ್ಲಿ ಸರಿಯಾಗಿ ಊಟ ಸಿಗದೇ ಸೋಂಕಿತರು ಪರದಾಡುತ್ತಿರುವ ಘಟನೆ ಜಿಲ್ಲೆಯ ಕಾರಟಗಿ ತಾಲೂಕಿನ ನಾಗನಕಲ್ ಗ್ರಾಮದಲ್ಲಿ ನಡೆದಿದೆ.
ಕೊಪ್ಪಳ ಕೋವಿಡ್ ಕೇರ್ ಸೆಂಟರ್ನಲ್ಲಿ ಅವ್ಯವಸ್ಥೆ: ಸರಿಯಾದ ಊಟವಿಲ್ಲದೇ ಪರದಾಟ
ಕಾರಟಗಿ ತಾಲೂಕಿನ ನಾಗನಕಲ್ ಗ್ರಾಮದ ಕೊರೊನಾ ಕೇರ್ ಸೆಂಟರ್ನಲ್ಲಿ ಸೋಂಕಿತರಿಗೆ ಸರಿಯಾಗಿ ಊಟ ಸಿಗುತ್ತಿಲ್ಲ ಎಂಬ ಆರೋಪ ಕೇಳಿ ಬಂದಿದ್ದು, ಆಡಳಿತ ವ್ಯವಸ್ಥೆಯ ವಿರುದ್ದ ಜನರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ಕೋವಿಡ್ ಕೇರ್ ಸೆಂಟರ್ನಲ್ಲಿ ಅವ್ಯವಸ್ಥೆ
ಇಲ್ಲಿನ ಕೊರೊನಾ ಕೇರ್ ಸೆಂಟರ್ನಲ್ಲಿರುವ ಸೋಂಕಿತರಿಗೆ ಸರಿಯಾಗಿ ಊಟ ಸಿಗುತ್ತಿಲ್ಲ ಎಂಬ ಆರೋಪ ಕೇಳಿ ಬಂದಿದೆ. ಈ ಹಿನ್ನೆಲೆಯಲ್ಲಿ ಸೋಂಕಿತರು ಸೆಂಟರ್ನಿಂದ ಹೊರಹೋಗಲು ಮುಂದಾಗಿದ್ದಾರೆ ಎನ್ನಲಾಗಿದೆ.
ಕೋವಿಡ್ ಕೇರ್ ಸೆಂಟರ್ ಸ್ಥಾಪನೆಯಲ್ಲಿ ಕನಕಗಿರಿ ಕ್ಷೇತ್ರ ರಾಜ್ಯದಲ್ಲಿಯೇ ಮೂರನೇ ಸ್ಥಾನದಲ್ಲಿದೆ ಎಂದು ಕ್ಷೇತ್ರದ ಶಾಸಕರು ಇತ್ತೀಚಿಗೆ ಹೇಳಿಕೆ ನೀಡಿದ್ದರು. ಆದರೆ, ಕನಕಗಿರಿ ಕ್ಷೇತ್ರದಲ್ಲಿನ ಕೋವಿಡ್ ಕೇರ್ ಸೆಂಟರ್ನಲ್ಲಿ ಈ ಅವ್ಯವಸ್ಥೆ ಕೇಳಿ ಬಂದಿದ್ದು, ಆಡಳಿತ ವ್ಯವಸ್ಥೆಯ ವಿರುದ್ದ ಜನರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
Last Updated : Jun 7, 2021, 5:52 PM IST