ಗದಗ: ಪಠ್ಯೇತರ ಚಟುವಟಿಕೆಗಳಿಗೆ ಸಾಮಗ್ರಿಗಳನ್ನು ನೀಡುವಂತೆ ಕೇಳಿದ್ದಕ್ಕೆ ಮುಖ್ಯ ಶಿಕ್ಷಕಿ ಅನ್ನಪೂರ್ಣ ರಾಠೋಡ್ ಇತರ ಶಿಕ್ಷಕರೊಂದಿಗೆ ಜಗಳ ಮಾಡಿದ್ದಾರೆ ಎನ್ನಲಾಗಿದೆ. ಮುಖ್ಯಶಿಕ್ಷಕಿಯನ್ನು ವರ್ಗಾವಣೆ ಮಾಡಬೇಕು ಎಂದು ವಿದ್ಯಾರ್ಥಿಗಳು, ಪೋಷಕರು ಶಾಲೆಗೆ ಬೀಗ ಹಾಕಿ ಪ್ರತಿಭಟನೆ ನಡೆಸಿದ್ದಾರೆ.
ಮುಖ್ಯಶಿಕ್ಷಕಿ ವರ್ಗಾವಣೆಗೆ ಆಗ್ರಹಿಸಿ ಶಾಲೆಗೆ ಬೀಗ ಹಾಕಿದ ವಿದ್ಯಾರ್ಥಿಗಳು
ಗದಗ ಜಿಲ್ಲೆಯ ಗಜೇಂದ್ರಗಡ ತಾಲೂಕಿನ ಕೊಡಗಾನೂರು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಅನ್ನಪೂರ್ಣ ರಾಠೋಡ ಅವರನ್ನು ವರ್ಗಾವಣೆ ಮಾಡಬೇಕು ಎಂದು ಆಗ್ರಹಿಸಿ ವಿದ್ಯಾರ್ಥಿಗಳು, ಪೋಷಕರಿಂದ ಪ್ರತಿಭಟನೆ
ಮುಖ್ಯ ಶಿಕ್ಷಕಿ ಅನ್ನಪೂರ್ಣ ರಾಠೋಡ ಅವರನ್ನು ವರ್ಗಾಯಿಸುವಂತೆ ಆಗ್ರಹಿಸಿ ವಿದ್ಯಾರ್ಥಿಗಳಿಂದ, ಗ್ರಾಮಸ್ಥರಿಂದ ಪ್ರತಿಭಟನೆ
ಜಿಲ್ಲೆ ಗಜೇಂದ್ರಗಡ ತಾಲೂಕಿನ ಕೊಡಗಾನೂರು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಈ ಘಟನೆ ನಡೆದಿದೆ. ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ವಿಷಯ ತಿಳಿಸಿದರೂ ಯಾವುದೇ ಕ್ರಮಕ್ಕೆ ಮುಂದಾಗಿಲ್ಲ ಎಂಬುದು ಗ್ರಾಮಸ್ಥರ ಆರೋಪವಾಗಿದೆ.
ಕೂಡಲೇ ಮುಖ್ಯ ಶಿಕ್ಷಕಿ ಅನ್ನಪೂರ್ಣ ರಾಠೋಡ್ ಅವರನ್ನು ವರ್ಗಾವಣೆ ಮಾಡುವಂತೆಯೂ ಒತ್ತಾಯಿಸಲಾಯಿತು.