ಬಂಟ್ವಾಳ: ಹಥ್ರಾಸ್ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಿಗೆ ಕಠಿಣ ಶಿಕ್ಷೆ ನೀಡಿ, ಯುವತಿಯ ಕುಟುಂಬಸ್ಥರಿಗೆ ನ್ಯಾಯ ದೊರಕಿಸಿಕೊಡಬೇಕು ಎಂದು ಮಾಜಿ ಸಚಿವ ಬಿ.ರಮಾನಾಥ ರೈ ಹೇಳಿದರು.
ಹಥ್ರಾಸ್ ಅತ್ಯಾಚಾರ ಪ್ರಕರಣ ಖಂಡಿಸಿ ಬಂಟ್ವಾಳದಲ್ಲಿ ಪ್ರತಿಭಟನೆ - ಅಂಬೇಡ್ಕರ್ ಯುವ ವೇದಿಕೆ
ಹಥ್ರಾಸ್ ಅತ್ಯಾಚಾರ ಘಟನೆ ಅತ್ಯಂತ ಹೇಯ ಕೃತ್ಯವಾಗಿದ್ದು, ಮುಂದೆ ಇಂಥಹ ಘಟನೆಗಳು ನಡೆಯದಂತೆ ಆರೋಪಿಗಳಿಗೆ ಕಠಿಣ ಶಿಕ್ಷೆ ನೀಡಿ ಎಂದು ಮಾಜಿ ಸಚಿವ ಬಿ.ರಮಾನಾಥ ರೈ ಒತ್ತಾಯಿಸಿದ್ದಾರೆ.
ಉತ್ತರ ಪ್ರದೇಶದಲ್ಲಿ ನಡೆದ ಅತ್ಯಾಚಾರ ಘಟನೆ ಖಂಡಿಸಿ, ಬಂಟ್ವಾಳ ಮಿನಿ ವಿಧಾನಸೌಧದ ಮುಂಭಾಗ ಅಂಬೇಡ್ಕರ್ ಯುವ ವೇದಿಕೆ ಹಾಗೂ ಕಾಂಗ್ರೆಸ್ ಜಂಟಿ ಆಶ್ರಯದಲ್ಲಿ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ಈ ಅತ್ಯಾಚಾರ ಘಟನೆ ಅತ್ಯಂತ ಹೇಯ ಕೃತ್ಯವಾಗಿದ್ದು, ಮುಂದೆ ಇಂಥಹ ಘಟನೆಗಳು ನಡೆಯದಂತೆ ನೋಡಿಕೊಳ್ಳಬೇಕು ಎಂದರು.
ಈ ವೇಳೆ ಜಿಲ್ಲಾ ಪಂಚಾಯತ್ ಸದಸ್ಯರಾದ ಚಂದ್ರಪ್ರಕಾಶ್ ಶೆಟ್ಟಿ, ಎಂ ಎಸ್ ಮೊಹಮ್ಮದ್, ಅಬ್ಬಾಸ್ ಅಲಿ, ಮಲ್ಲಿಕಾ ವಿ ಶೆಟ್ಟಿ, ಬೇಬಿ ಕುಂದರ್ ಮತ್ತು ಸುದೀಪ್ ಕುಮಾರ್ ಶೆಟ್ಟಿ, ಜಯಂತಿ ವಿ ಪೂಜಾರಿ, ಪದ್ಮನಾಭ ನರಿಂಗಾನ, ಪುರಸಭಾ ಸದಸ್ಯರಾದ ಜನಾರ್ದನ್ ಚಂಡ್ತಿಮಾರ್, ಬುಡ ಮಾಜಿ ಅಧ್ಯಕ್ಷರಾದ ಸದಾಶಿವ ಬಂಗೇರ, ಇಂಟಕ್ ಜಿಲ್ಲಾ ಕಾರ್ಯದರ್ಶಿ ಚಿತ್ತರಂಜನ ಶೆಟ್ಟಿ, ಬಂಟ್ವಾಳ ಎನ್.ಎಸ್.ಯು.ಐ ಅಧ್ಯಕ್ಷರಾದ ವಿನಯ್ ಕುಮಾರ್, ಪ್ರಮುಖರಾದ ಉಮೇಶ್ ಆಮ್ಟೂರು, ಪ್ರೇಮ್ ಪಲ್ಲಮಜಲು, ಪ್ರವೀಣ್ ಸೂರ್ಯ ಹೊಸಂಗಡಿ, ಸತೀಶ್ ಅರಳ, ಸಂದೇಶ್ ಅರಳ, ರಕ್ಷಿತ್ ಸರಪಾಡಿ, ಕಿರಣ್ ಪಲ್ಲಮಜಲು, ಜನಾರ್ದನ ಕಕ್ಕೆಪದವು, ಪುಷ್ಪರಾಜ್ ಉಪಸ್ಥಿತರಿದ್ದರು.